ನಿಖಿಲ್ ಕುಮಾರ್ ಹೊಸ ಸಿನಿಮಾ ಸೆಟ್ ನಲ್ಲಿ ಕಾಣಿಸಿಕೊಂಡ ಶಿವಣ್ಣ!

masthmagaa.com:

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಯು ಎಸ್ ಪ್ರವಾಸ ಮುಗಿಸಿ ಇತ್ತೀಚಿಗಷ್ಟೇ ವಾಪಾಸ್ ಆಗಿದ್ದಾರೆ. ವಿದೇಶದಿಂದ ಬಂದ ಶಿವಣ್ಣ ನಟ ನಿಖಿಲ್ ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಟ ನಿಖಿಲ್ ಕುಮಾರ್ ಅವರ ಹೊಸ ಸಿನಿಮಾದ ಚಿತ್ರೀಕರಣ ನೆಡೆಯುತ್ತಿದ್ದು , ಸಿನಿಮಾ ಸೆಟ್ ಗೆ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಭೇಟಿಕೊಟ್ಟಿದ್ದಾರೆ.

ಬಹಳ ದಿನಗಳ ನಂತ್ರ ನಿಖಿಲ್ ಹಾಗೂ ಶಿವಣ್ಣ ಭೇಟಿ ಮಾಡಿದ್ದು ಒಂದಿಷ್ಟು ಸಮಯ ಒಟ್ಟಿಗೆ ಕಳೆದಿದ್ದಾರೆ. ಸಿನಿಮಾ ವಿಚಾರ ಹೊರೆತು ಪಡಿಸಿ ಒಂದಿಷ್ಟು ವೈಯಕ್ತಿಕ ವಿಚಾರಗಳನ್ನು ಶಿವಣ್ಣ ಹಾಗೂ ನಿಖಿಲ್ ಚರ್ಚೆ ಮಾಡಿದ್ದಾರೆ. ಇದೇ ಸಮಯದಲ್ಲಿ ಲೈಕಾ ಸಂಸ್ಥೆ ನಿರ್ಮಾಣ ಮಾಡ್ತಿರೋ ಸಿನಿಮಾ ಬಗ್ಗೆಯೂ ಶಿವಣ್ಣ ಮಾಹಿತಿ ಪಡೆದುಕೊಂಡರು.
ನಿಖಿಲ್ ಸಿನಿಮಾದ ಚಿತ್ರೀಕರಣ ಹಳೆ ಕಟ್ಟಡ ಒಂದರ ಮೂರನೇ ಮಹಡಿಯಲ್ಲಿ ನಡೆಯುತ್ತಿತ್ತು ಲಿಫ್ಟ್ ಇಲ್ಲದ ಕಾರಣ ನಿಖೀಲ್ ಭೇಟಿ ಮಾಡಲು ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಮೆಟ್ಟಿಲು ಹತ್ತಿಕೊಂಡೇ ಹೋಗಿದ್ದಾರೆ. ನಿಖಿಲ್ ಭೇಟಿ ಮಾಡಿ ಹೊಸ ಸಿನಿಮಾಗೆ ಶುಭಕೋರಿದ್ರು. ಪ್ರೀತಿಯಿಂದ ತಮ್ಮನ್ನ ನೋಡಲು ಬಂದ ಶಿವಣ್ಣ ಹಾಗೂ ಗೀತಾ ಶಿವರಾಜ್ ಕುಮಾರ್ ಅವರನ್ನು ನಿಖಿಲ್ ಕೊನೆಗೆ ಕಾರ್ ವರೆಗೂ ಹೋಗಿ ಬೀಳ್ಕೊರು.

ಅಣ್ಣಾವ್ರ ಕುಟುಂಬ ಹಾಗೂ ದೊಡ್ಡ ಗೌಡರ ಕುಟುಂಬ ಈಗಿನಿಂದಲ್ಲ ಹಿಂದಿನಿಂದಲೂ ಅನ್ಯೂನ್ಯವಾಗಿದ್ದಾರೆ. ಅದರಲ್ಲೂ ಪುನೀತ್ ರಾಜ್ ಕುಮಾರ್ ಅವ್ರಿಗೆ ನಿಖಿಲ್ ಡೆಡಿಕೇಷನ್ ಬಗ್ಗೆ ತುಂಬಾ ಪ್ರೀತಿ ಇತ್ತು. ಈಗ ಶಿವಣ್ಣ ಹಾಗೂ ನಿಖಿಲ್ ಭೇಟಿ ಎರಡೂ ಕುಟುಂಬದ ಬಾಂದವ್ಯವನ್ನ ಮತ್ತೆ ನೆನಪಿಸುತ್ತಿದೆ.

ಇನ್ನು ನಿಖಿಲ್ ಅಭಿನಯ ಮಾಡುತ್ತಿರೋ ಲೈಕಾ ಸಂಸ್ಥೆ ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಇನ್ನು ಟೈಟಲ್ ಫಿಕ್ಸ್ ಆಗಬೇಕಿದೆ. ಚಿತ್ರವನ್ನ ಲಕ್ಷ್ಮಣ್ ನಿರ್ದೇಶನ ಮಾಡುತ್ತಿದ್ದು ಚಿತ್ರೀಕರಣದ ಮೊದಲ ಶೆಡ್ಯೂಲ್ ಇತ್ತೀಚಿಗಷ್ಟೇ ಶುರುವಾಗಿದೆ. ಚಿತ್ರಕ್ಕೆ ಯುಕ್ತಿ ತರೇಜಾ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಮೂಲಕ ಲೈಕಾ ಸಂಸ್ಥೆ ಮೊದಲ ಬಾರಿಗೆ ಕನ್ನಡ ಇಂಡಸ್ಟ್ರಿಯಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದೆ.

-masthmagaa.com

Contact Us for Advertisement

Leave a Reply