ರಾಜ್ಯದಲ್ಲಿ ಸೃಷ್ಟಿಯಾಗಲಿದೆ ಇನ್ನೂ 3 DCM ಹುದ್ದೆಗಳು?

masthmagaa.com:

ಡಿಸಿಎಂ ಡಿಕೆ ಶಿವಕುಮಾರ್‌ ಜೊತೆಗೆ ಇನ್ನೂ 3 ಮಂದಿ ಉಪಮುಖ್ಯಮಂತ್ರಿಗಳನ್ನು ನೇಮಿಸುವಂತೆ ಹೈಕಮಾಂಡ್‌ಗೆ ಮನವಿ ಮಾಡುತ್ತೇನೆ ಅಂತ ಸಚಿವ ರಾಜಣ್ಣ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿತದೃಷ್ಟಿಯಿಂದ 3 ಉಪ ಡಿಸಿಎಂಗಳ ಹುದ್ದೆ ಸೃಷ್ಟಿಸಲು ಸಲಹೆ ನೀಡಲು ನಿರ್ಧರಿಸಿದ್ದೇನೆ. ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನ ಬರಲು ಎಸ್ಸಿ-ಎಸ್ಟಿ ಹಾಗೂ ಅಲ್ಪಸಂಖ್ಯಾತರು, ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ ಬೆಂಬಲಿಸಿರುವುದು ಸಹ ಕಾರಣ. ಹೀಗಾಗಿ ಆ ಸಮುದಾಯಗಳಿಗೂ ಆದ್ಯತೆ ನೀಡಿದರೆ ಪಕ್ಷಕ್ಕೆ ಅನುಕೂಲವಾಗಲಿದೆ ಅನ್ನೋದು ನನ್ನ ಅಭಿಪ್ರಾಯ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply