ಸಿದ್ದು ವಿರುದ್ಧ ಮೂಲ ಕಾಂಗ್ರೆಸ್ಸಿಗರ ಸಿಟ್ಟು ಸ್ಫೋಟ..!

15 ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೀತಿದೆ. ಆದ್ರೆ ಈ ವೇಳೆ ಸಿದ್ದರಾಮಯ್ಯ ವಿರುದ್ಧ ಮೂಲ ಕಾಂಗ್ರೆಸ್ಸಿಗರ ಸಿಟ್ಟು ಸ್ಫೋಟಗೊಂಡಿದೆ. ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೆ.ಹೆಚ್.ಮುನಿಯಪ್ಪ ಮತ್ತು ಬಿ.ಕೆ ಹರಿಪ್ರಸಾದ್ ಕೆಂಡಾಮಂಡಲರಾಗಿದ್ದಾರೆ. ನಮ್ಮನ್ನು ಪರಿಗಣನೆಗೆ ತೆಗೆದುಕೊಳ್ಳದೆ ಪೂರ್ವಭಾವಿ ಸಭೆ ನಡೆಸಿದ್ದು ಯಾಕೆ ಅಂತ ಸಿದ್ದರಾಮಯ್ಯ ವಿರುದ್ಧ ಕೆ.ಹೆಚ್.ಮುನಿಯಪ್ಪ ಕಿಡಿಕಾರಿದ್ದಾರೆ ಎನ್ನಲಾಗಿದೆ. ಇನ್ನು 15 ಕ್ಷೇತ್ರಗಳ ಉಪಚುನಾವಣೆಗೆ ಇಂದೇ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

Contact Us for Advertisement

Leave a Reply