ಎಚ್‍ಡಿಕೆಯನ್ನು ಹದ್ದಿಗೆ ಹೋಲಿಸಿದ್ರಾ ಸಿದ್ದು..?

ಮೈತ್ರಿ ಸಾಕಾಗಿ ಹೋಗಿದೆ ಎಂದಿದ್ದ ಕುಮಾರಸ್ವಾಮಿಗೆ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಾನೇ ನಂಬಿದ ಗಿಣಿಗಳು ಹದ್ದಾಗಿ ಕಾಡಿದ್ದು ನಿಜ. ನನ್ನದೇ ತಪ್ಪು, 4 ದಶಕಗಳ ರಾಜಕೀಯ ಒಡನಾಟದ ಅನುಭವದ ನಂತರವೂ ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು. ಕುಕ್ಕದೇ ಬಿಡುತ್ತಾ? ಅನುಭವಕ್ಕಿಂತ ದೊಡ್ಡ ಪಾಠ ಏನಿದೆ ಹೇಳಿ..? ಅಂತ ಹೇಳಿದ್ದಾರೆ.

ಇತ್ತ ಬೈ ಎಲೆಕ್ಷನ್ ಬಳಿಕ ಹೊಸ ನಾಟಕ ಶುರುವಾಗಲಿದೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಉಪಚುನಾವಣೆಗೆ 2 ದಿನಗಳಲ್ಲಿ ಪಟ್ಟಿ ಪೈನಲ್ ಮಾಡುತ್ತೇವೆ. ಈ ಬಾರಿ ಎಲ್ಲಾ ಕ್ಷೇತ್ರಗಳಲ್ಲಿ ಸ್ಥಳೀಯರಿಗೆ ಅವಕಾಶ ನೀಡುತ್ತಿದ್ದೇವೆ ಅಂತ ಮಾಹಿತಿ ನೀಡಿದ್ರು. ಅಲ್ಲದೆ ಈ ಉಪಚುನಾವಣೆ ಆಡಳಿತ ಪಕ್ಷ ಸೇರಿದಂತೆ ಎಲ್ಲಾ ಪಕ್ಷಗಳಿಗೂ ಅಗ್ನಿಪರೀಕ್ಷೆಯಾಗಿದ್ದು, ಚುನಾವಣೆ ಬಳಿಕ ರಾಜ್ಯದಲ್ಲಿ ಹೊಸ ನಾಟಕ ಶುರುವಾಗಲಿದೆ ಅಂತ ಹೇಳಿದ್ದಾರೆ.

Contact Us for Advertisement

Leave a Reply