masthmagaa.com:

ಕಾಂಗ್ರೆಸ್​ ಪಕ್ಷದ ಸಂಸ್ಥಾಪನಾ ದಿನವಾದ ಹಿನ್ನೆಲೆ ವಿಪಕ್ಷ ನಾಯಕ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್​ ಮಾಡಿದ್ದಾರೆ. ‘ಕಾಂಗ್ರೆಸ್ ಪಕ್ಷ ರಾಜಕೀಯ ಲಾಭಕ್ಕಾಗಿ ಅಥವಾ ಅಧಿಕಾರ ನಡೆಸಬೇಕೆಂಬ ಇರಾದೆಯಿಂದ ಸ್ಥಾಪನೆಯಾದ ಪಕ್ಷವಲ್ಲ. ದೇಶ ಬ್ರಿಟೀಷರ ಆಳ್ವಿಕೆಯಿಂದ ನಲುಗಿ ಹೋಗಿದ್ದ ಕಾಲದಲ್ಲಿ, ಇಲ್ಲಿನ ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ, ಸಮಾನತೆ ಮತ್ತು ಹಕ್ಕುಗಳನ್ನು ಕೊಡಿಸುವ ಹೋರಾಟಕ್ಕೆ ವೇದಿಕೆಯಾಗಲೆಂದೇ ಜನ್ಮತಳೆದದ್ದು ಕಾಂಗ್ರೆಸ್. ಸ್ವಾತಂತ್ರ್ಯ ಪೂರ್ವದಲ್ಲೇ ಸ್ಥಾಪನೆಯಾದ RSS ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಒಂದೇ ಒಂದು ಉದಾಹರಣೆಯಿದೆಯೇ? ನಾವು ಮಹಾತ್ಮ ಗಾಂಧಿಯವರು ಬೋಧಿಸಿದ ಹಿಂದುತ್ವದ ಹಾದಿಯಲ್ಲಿ ನಡೆಯುವವರು. ಬಿಜೆಪಿಯವರಂತೆ ಧರ್ಮ, ದೇವರನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವವರಲ್ಲ. ನಾನು ಹಿಂದೂ, ಗಾಂಧೀಜಿಯವರು ಹಿಂದೂ, ಗೋಪಾಲಕೃಷ್ಣ ಗೋಖಲೆ ಅವರು ಹಿಂದೂ, ನಮ್ಮದು ಪ್ರೀತಿಸುವ ಹಿಂದುತ್ವವಾದರೆ, ಬಿಜೆಪಿಯವರದು ದ್ವೇಷಿಸುವ ಹಿಂದುತ್ವ. ವಯಸ್ಸಾದ ಹಸು, ಗಂಡು ಕರು, ಹೀಗೆ ಅನುಪಯುಕ್ತ ಜಾನುವಾರುಗಳನ್ನ ರೈತರು ಏನು ಮಾಡಬೇಕು? ಎಂದು ಪ್ರಶ್ನಿಸಿದರೆ ನನ್ನನ್ನ ಗೋಮಾತೆಯ ವಿರೋಧಿ ಅಂತಾರೆ. ವಯಸ್ಸಾದ ಹಸುವೊಂದನ್ನು ಸಾಕಲು ರೈತನಿಗೆ ನಿತ್ಯ 100 ರೂಪಾಯಿ ಖರ್ಚಾಗುತ್ತೆ, ಅದನ್ನೇನಾದ್ರೂ ಬಿಜೆಪಿಯವರು ಕೊಡ್ತಾರಾ? ಕಾಂಗ್ರೆಸಿಗೆ ಹಿನ್ನಡೆ ಆಗುತ್ತಿದೆ ಎಂದರೆ, ದೇಶದ ಬಡವರು, ಹಿಂದುಳಿದವರು, ಶೋಷಿತ ವರ್ಗದ ಜನರಿಗೆ ಹಿನ್ನಡೆಯಾಗುತ್ತಿದೆ ಎಂದರ್ಥ.ದೇಶದ ಭವಿಷ್ಯಕ್ಕಾಗಿ ನಾವೆಲ್ಲರು ಕಾಂಗ್ರೆಸ್ ಪಕ್ಷವನ್ನು ಬಲಪಡಿಸೋಣ’ ಅಂತ ಸಿದ್ದರಾಮಯ್ಯ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply