ಪರಂ ಮೇಲೆ ಐಟಿ ದಾಳಿಗೆ ಸಿದ್ದು ಕೆಂಡಾಮಂಡಲ..!

ಮಾಜಿ ಡಿಸಿಎಂ ಪರಮೇಶ್ವರ್ ಮನೆ ಮೇಲಿನ ಐಟಿ ದಾಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಕೆಂಡವಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರೋ ಅವರು, ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ಐಟಿ ಇಲಾಖೆ ನಡೆಸುತ್ತಿರುವ ದಾಳಿಗಳ ಹಿಂದೆ ರಾಜಕೀಯ ದುರುದ್ದೇಶ ಇದೆ. ನಮ್ಮ ಪಕ್ಷವನ್ನು ರಾಜಕೀಯವಾಗಿ ಎದುರಿಸಲಾಗದೆ ನರೇಂದ್ರ ಮೋದಿಯವರ ಸರ್ಕಾರ ಈ ರೀತಿ ಅಧಿಕಾರ ದುರ್ಬಳಕೆ ಮಾಡಿಕೊಂಡು ನಮ್ಮನ್ನು ದಮನಿಸಲು ಹೊರಟಿದೆ. ಇದಕ್ಕೆ ನಾವು ಜಗ್ಗುವುದಿಲ್ಲ, ಬಗ್ಗುವುದಿಲ್ಲ ಎಂದಿದ್ದಾರೆ. ಈ ಹಿಂದೆ ಡಿ.ಕೆ.ಶಿವಕುಮಾರ್ ಅವರ ಮೇಲೆ ಐಟಿ ದಾಳಿ ನಡೆದಾಗಲೂ ಸಿದ್ದರಾಮಯ್ಯ ಇದೇ ಮಾತು ಹೇಳಿದ್ದರು.

Contact Us for Advertisement

Leave a Reply