ಪಕ್ಷಾಂತರಿಗಳನ್ನು ಸೋಲಿಸಲು ಸಿದ್ಧ: `ಟಗರು’ ಗುಟುರು

15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದ್ದು, ಜನರೂ ಪಕ್ಷಾಂತರಿಗಳನ್ನು ಸೋಲಿಸಲು ತೀರ್ಮಾನ ಮಾಡಿದ್ದಾರೆ. ಇನ್ನು ಕಾಂಗ್ರೆಸ್ ಕೂಡಾ ಪಕ್ಷಾಂತರಿಗಳನ್ನು ಸೋಲಿಸಲು ಎಲ್ಲಾ ಸಿದ್ಧತೆ ಮಾಡಿಕೊಂಡಿದೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿದ್ದು ಸಾಕಿದ ಗಿಣಿಗಳು ಹದ್ದಾಗಿ ಕುಕ್ಕಿದವು ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕುಮಾರಸ್ವಾಮಿ ಯಾವ ಉದ್ದೇಶದಿಂದ ಹಾಗೆ ಹೇಳಿದ್ದಾರೋ ಗೊತ್ತಿಲ್ಲ. ಮೈಸೂರು ಮತ್ತು ಕೊಡಗಿನಲ್ಲಿ ಬಿಜೆಪಿಗೆ ಓಟು ಹಾಕಿಸುವಂತೆ ಕುಮಾರಸ್ವಾಮಿ ನಮಗೆ ಹೇಳಿದ್ದರು ಅಂತ ಜೆಡಿಎಸ್‍ನ ಜಿ.ಟಿ.ದೇವೇಗೌಡರೇ ಹೇಳಿದ್ದಾರೆ. ಹಾಗಾದ್ರೆ ನಾಟಕ ಆಡ್ತಿರೋರು ಯಾರು ಅಂತ ಪ್ರಶ್ನಿಸಿದ್ರು. ಇನ್ನೇನು ಸಿದ್ದರಾಮಯ್ಯ ಹೊರಡಬೇಕು ಅನ್ನುವಷ್ಟರಲ್ಲಿ ಅಲ್ಲಿಗೆ ಬಂದ ರೈತನೊಬ್ಬ ನನ್ನ ಸಾಲ ಇನ್ನೂ ಮನ್ನಾ ಆಗಿಲ್ಲ ಅಂದ್ರು. ಅದಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ನಾನು ಸರಿಯಾಗಿ ಮಾಡಿದ್ದೆ. ಕುಮಾರಸ್ವಾಮಿ ಮಾಡಿದ ಸಾಲಮನ್ನಾ ಸರಿ ಇಲ್ಲಪ್ಪಾ.. ನಾನೇನು ಮಾಡಲಿ ಅಂದ್ರು.

Contact Us for Advertisement

Leave a Reply