ಜುಲೈನಲ್ಲಿ ಅಬ್ಬರಿಸಿ ಬೊಬ್ಬಿರಿದ ಕೊರೋನಾ.. ಆಗಸ್ಟ್ ಕಥೆ ಏನು..?

masthmagaa.com:

ದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು ಕಳೆದ 24 ಗಂಟೆಗಳಲ್ಲಿ ದಾಖಲೆಯ 57,117 ಜನರಿಗೆ ಹೊಸದಾಗಿ ಸೋಂಕು ತಗುಲಿದೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಒಂದು ದಿನದಲ್ಲಿ ದೃಢಪಟ್ಟ ಅತಿ ಹೆಚ್ಚು ಪ್ರಕರಣ ಇದಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 16,95,988 ಆಗಿದೆ.

ಕಳೆದ 24 ಗಂಟೆಗಳಲ್ಲಿ 764 ಸೋಂಕಿತರು ಮೃತಪಟ್ಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 36,511ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೆ 10,94,374 ಸೋಂಕಿತರು ಗುಣಮುಖರಾಗಿದ್ದು 5,65,103 ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜುಲೈ ತಿಂಗಳಲ್ಲಿ ಭಾರತದಲ್ಲಿ ಬರೋಬ್ಬರಿ 11 ಲಕ್ಷ ಜನರಿಗೆ ಸೋಂಕು ತಗುಲಿದ್ದು 19,000ಕ್ಕೂ ಹೆಚ್ಚು ಸೋಂಕಿತರು ಮೃತಪಟ್ಟಿದ್ದಾರೆ. ಜೂನ್​ನಲ್ಲಿ ಸುಮಾರು 4 ಲಕ್ಷ ಜನರಿಗೆ ಸೋಂಕು ತಗುಲಿತ್ತು. ಈಗ ಅದಕ್ಕಿಂತ ಸುಮಾರು ಮೂರು ಪಟ್ಟು ಹೆಚ್ಚು ಜನರಿಗೆ ಸೋಂಕು ತಗುಲಿರೋದು ಆತಂಕಕಾರಿ. ಜೂನ್​ನಲ್ಲಿ ಸುಮಾರು 12,000 ಸೋಂಕಿತರು ಮೃತಪಟ್ಟಿದ್ದರು.

ಜುಲೈ ಮೊದಲಾರ್ಧದಲ್ಲಿ ಸುಮಾರು ಮೂರೂವರೆ ಲಕ್ಷ ಜನರಿಗೆ ಸೋಂಕು ತಗುಲಿತ್ತು. ಆದ್ರೆ ಎರಡನೇ ಅರ್ಧದಲ್ಲಿ ಬರೋಬ್ಬರಿ 7,30,000 ಜನರಿಗೆ ಸೋಂಕು ತಗುಲಿದೆ. ಅಂದ್ರೆ ಮೊದಲಾರ್ಧಕ್ಕಿಂತ ಎರಡನೇ ಅರ್ಧದಲ್ಲಿ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ ಅಂತ ಅರ್ಥ.

ದೇಶದಲ್ಲಿ ಗುಣಮುಖ ಪ್ರಮಾಣ 64.53 ಪರ್ಸೆಂಟ್ ಇದೆ. ಸಾವಿನ ಪ್ರಮಾಣ 2.15 ಪರ್ಸೆಂಟ್ ಇದೆ. ಜುಲೈ 29ರಂದು ದೇಶದಲ್ಲಿ 5.25 ಲಕ್ಷ ಸ್ಯಾಂಪಲ್​ಗಳನ್ನ ಪರೀಕ್ಷಿಸಲಾಗಿದೆ. ಇದುವರೆಗೆ ಒಟ್ಟು 1.93 ಕೋಟಿ ಸ್ಯಾಂಪಲ್​ಗಳನ್ನ ಪರೀಕ್ಷೆ ಮಾಡಲಾಗಿದೆ ಅಂತ ಐಸಿಎಂಆರ್ ಹೇಳಿದೆ.

-masthmagaa.com

Contact Us for Advertisement

Leave a Reply