ಗಂಗಾರಾಮ್ ಆಸ್ಪತ್ರೆಯ 108 ಮಂದಿ ವೈದ್ಯಕೀಯ ಸಿಬ್ಬಂದಿ ಕ್ವಾರಂಟೈನ್​​..!

masthmagaa.com:

ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಯ 108 ಮಂದಿ ವೈದ್ಯಕೀಯ ಸಿಬ್ಬಂದಿಯನ್ನು ಕ್ವಾರಂಟೈನ್​ನಲ್ಲಿ ಇಡಲಾಗಿದೆ. ಇವರಲ್ಲಿ ಸೀನಿಯರ್ ಡಾಕ್ಟರ್​, ನರ್ಸ್​​ ಮತ್ತು ಇತರೆ ವೈದ್ಯಕೀಯ ಸಿಬ್ಬಂದಿ ಕೂಡ ಸೇರಿದ್ದಾರೆ. ಈ ಆಸ್ಪತ್ರೆಯಲ್ಲಿ ಬೇರೆ ಕಾಯಿಲೆಯಿಂದ ಬಳಲುತ್ತಿದ್ದ ಇಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಹೀಗಾಗಿ ಇವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರನ್ನು ಕ್ವಾರಂಟೈನ್​ನಲ್ಲಿ ಇಡಲಾಗಿದೆ. ಇವರಲ್ಲಿ 23 ಮಂದಿಯನ್ನು ಆಸ್ಪತ್ರೆಯಲ್ಲೇ ಇರಿಸಲಾಗಿದ್ದು, ಉಳಿದವರನ್ನು ಮನೆಗಳಲ್ಲೇ ಕ್ವಾರಂಟೈನ್​ನಲ್ಲಿ ಇರುವಂತೆ ಸೂಚಿಸಲಾಗಿದೆ.

ದೆಹಲಿಯಲ್ಲಿ ಈವರೆಗೆ 390 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ.

-masthmagaa.com

Contact Us for Advertisement

Leave a Reply