3500 ಕ್ಕೂ ಹೆಚ್ಚಿನ ಸಿನಿಮಾ ಕಾರ್ಮಿಕರ ಅಕೌಂಟ್ ಗೆ ತಲಾ 5000 ರೂಪಾಯಿ ಘೋಷಿಸಿದ ಯಶ್!!

Masthmagaa.com: ಕೋರೋನಾದಿಂದ ಕಂಗೆಟ್ಟಿರುವ ಚಿತ್ರರಂಗದ ನೆರವಿಗೆ ರಾಕಿಂಗ್ ಸ್ಟಾರ್ ಯಶ್ ಮಿಡಿದಿದ್ದಾರೆ. ಸಂಕಷ್ಟದಲ್ಲಿರುವ ಸಿನಿಮಾ ತಂತ್ರಜ್ಞರ ಸಹಾಯಕ್ಕೆ ಮುಂದಾಗಿದ್ದಾರೆ.ತಮ್ಮದೇ ಹಣದಿಂದ ಒಟ್ಟೂ 3,000 ತಂತ್ರಜ್ಞರ ಖಾತೆಗೆ ತಲಾ 5,000 ರೂಪಾಯಿ ಹಾಕುತ್ತಿರುವ ಬಗ್ಗೆ ಯಶ್​ ಘೋಷಣೆ ಮಾಡಿದ್ದಾರೆ. ತಂತ್ರಜ್ಞರಿಗೆ ಸಹಾಯ ಮಾಡುತ್ತಿರುವ ಬಗ್ಗೆ ಯಶ್​ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದ್ದಾರೆ. ಅವರು ನೀಡುತ್ತಿರುವ ಒಟ್ಟೂ ಹಣ ಬರೋಬ್ಬರಿ ಒಂದೂವರೆ ಕೋಟಿ ರೂಪಾಯಿ ಆಗಲಿದೆ.

ಕಣ್ಣಿಗೆ ಕಾಣದ ವೈರಸ್‌ ಮನುಷ್ಯನ ಬದುಕನ್ನು ಹೆಚ್ಚುಕಮ್ಮಿ ಬುಡಮೇಲು ಮಾಡಿದೆ. ಅದರಲ್ಲೂ ಕಳೆದೊಂದು ವರ್ಷದಿಂದ ನನ್ನ ಸಿನಿಮಾ ಕುಟುಂಬ ಅಸಹಾಯಕತೆಯಿಂದ ಕೈಕಟ್ಟಿ ಕುಳಿತಿದೆ. ಹೌದು. ಇದು ಬರೀ ಮಾತನಾಡುವ ಸಮಯವಲ್ಲ. ಸಂಕಷ್ಟದಲ್ಲಿರುವ ಸಿನಿಮಾ ಕುಟುಂಬದ ಜೊತೆ ನಿಲ್ಲುವ ಸಮಯ. ಹಾಗಾಗಿ ಚಿತ್ರರಂಗದ 21 ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 3,000ಕ್ಕೂ ಹೆಚ್ಚಿರುವ ನಮ್ಮ ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ 5 ಸಾವಿರ ಹಣವನ್ನ ತನ್ನ ಸಂಪಾದನೆಯ ಹಣದಿಂದ ಭರಿಸಲು ನಿರ್ಧರಿಸಿದ್ದೇನೆ. ಈ ಬಗ್ಗೆ ಈಗಾಗಲೇ ನಮ್ಮ ಒಕ್ಕೂಟದ ಅಧ್ಯಕ್ಷರಾದ ಸಾ.ರಾ.ಗೋವಿಂದ್‌ ಮತ್ತು ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರನಾಥ್‌ ಅವರೊಂದಿಗೆ ಚರ್ಚಿಸಿದ್ದೇನೆ. ನಮ್ಮ ಕಲಾವಿದರು, ತಂತ್ರಜ್ಞರು ಮತ್ತು ಕಾರ್ಮಿಕರ ಅಧಿಕೃತ ಬ್ಯಾಂಕ್‌ ವಿವರ ತಲುಪಿದ ತಕ್ಷಣವೇ ಇದು ಕಾರ್ಯರೂಪಕ್ಕೆ ಬರಲಿದೆ’ ಎಂದು ಯಶ್‌ ತಿಳಿಸಿದ್ದಾರೆ.

ಈ ಸಣ್ಣ ಸಹಾಯ ಈಗ ಎದುರಾಗಿರುವ ಎಲ್ಲ ಕಷ್ಟಗಳಿಗೂ ಪರಿಹಾರ ಎಂಬುವುದು ನನ್ನ ಭಾವನೆಯಲ್ಲ. ಬದಲಿಗೆ ಶಕ್ತಿ ಇರುವ ಹೃದಯವಂತರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಂಕಷ್ಟದಲ್ಲಿರುವ ಜನಸಮುದಾಯದ ಜೊತೆ ಹೆಗಲಿಗೆ ಹೆಗಲು ಕೊಟ್ಟು ನಿಂತು ಸಹಾಯ ಮಾಡಿದರೆ, ನಾನು ಮಾಡಿದ ಪ್ರಯತ್ನಕ್ಕೂ ಸಾರ್ಥಕತೆ ಬರುತ್ತದೆ ಎನ್ನುವುದು ನನ್ನ ಆಶಯ’ ಎಂದು ತಮ್ಮ  ಪೋಸ್ಟ್‌ನಲ್ಲಿ ಯಶ್‌ ಉಲ್ಲೇಖಿಸಿದ್ದಾರೆ.

– Masthmagaa.com

Contact Us for Advertisement

Leave a Reply