ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್‌.! ಇಲ್ಲಿದೆ ನೋಡಿ ಹವಾಮಾನ ಮಾಹಿತಿ

masthmagaa.com:

ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ತೆಕ್ಕಾರು ಎಂಬಲ್ಲಿ ಅತಿಹೆಚ್ಚು 92 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡು ಜಿಲ್ಲೆಗಳ ಕೆಲವು ಕಡೆ ಅಧಿಕ ಮಳೆ ಮತ್ತು ಇನ್ನುಳಿದ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮತ್ತು ದಕ್ಷಿಣ ಕನ್ನಡದಲ್ಲಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

-masthmagaa.com

Contact Us for Advertisement

Leave a Reply