ತಿಹಾರ್ ಜೈಲಿಗೆ ಸೋನಿಯಾ ಗಾಂಧಿ..!

ತಿಹಾರ್ ಜೈಲಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ನೀಡಿದ್ದಾರೆ. ಕಾಂಗ್ರೆಸ್ ನಾಯಕರಾದ ಪಿ.ಚಿದಂಬರಂ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಇಬ್ಬರು ನಾಯಕರು ಜೈಲಿಗೆ ಹೋದ ಬಳಿಕ ಸೋನಿಯಾ ಗಾಂಧಿ ಭೇಟಿಯಾಗಿ ಮಾತನಾಡಿರಲಿಲ್ಲ. ಹೀಗಾಗಿ ಇಂದು ಬೆಳಗ್ಗೆಯೇ ಭೇಟಿ ನೀಡಿ, ಮಾತುಕತೆ ನಡೆಸಿದ್ದಾರೆ. ಸೋನಿಯಾ ಗಾಂಧಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಾಥ್ ಕೊಟ್ಟಿದ್ದಾರೆ. ಐಎನ್‍ಎಕ್ಸ್ ಮೀಡಿಯಾ ಕೇಸ್‍ನಲ್ಲಿ ಪಿ.ಚಿದಂಬರಂ ಜೈಲಿನಲ್ಲಿದ್ರೆ, ಅಕ್ರಮ ಹಣ ವರ್ಗಾವಣೆ ಕೇಸ್‍ನಲ್ಲಿ ಡಿ.ಕೆ.ಶಿವಕುಮಾರ್ ಜೈಲಿಗೆ ಹೋಗಿದ್ದಾರೆ.

ಈ ಹಿಂದೆಯೇ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್‍ಗೆ ಕರೆ ಮಾಡಿದ್ದ ಸೋನಿಯಾ ಗಾಂಧಿ ಧೈರ್ಯ ತುಂಬಿದ್ದರು. ಯಾವುದೇ ರೀತಿಯ ಭಯ ಬೇಡ. ಕಾಂಗ್ರೆಸ್ ಪಕ್ಷ ನಿಮ್ಮ ಜೊತೆಗಿದೆ. ಕಾನೂನು ಹೋರಾಟ ನಡೆಸಿ ಎಂದು ತಿಳಿಸಿದ್ದರು.

Contact Us for Advertisement

Leave a Reply