ಮಳೆ ಎಲ್ಲಿಲ್ಲಿ ಬರುತ್ತೆ? ಜಾವಾದ್ ಚಂಡಮಾರುತ ಹೇಗಿರುತ್ತೆ? ಇಲ್ನೋಡಿ!

masthmagaa.com:

ರಾಜ್ಯದ ಕೆಲವೊಂದುಕಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ತ್ರಿಪುರ ಗ್ರಾಮದಲ್ಲಿ ಅತಿಹೆಚ್ಚು 119 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳ ಬಹುತೇಕ ಕಡೆ ಸಾಧರಣ ಮಳೆ ಮತ್ತು ಕೆಲವೊಂದುಕಡೆ ಭಾರಿ ಮಳೆಯಾಗೋ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳ ಕೆಲವೊಂದುಕಡೆ ಸಣ್ಣ ಪ್ರಮಾಣದ ಮಳೆಯಾಗೋ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಮತ್ತೊಂದುಕಡೆ ಜಾವಾದ್​ ಅನ್ನೋ ಹೊಸ ಸೈಕ್ಲೋನ್ 90 ರಿಂದ 100 ಕಿಲೋಮೀಟರ್ ಪ್ರತಿ ಗಂಟೆ ವೇಗದಲ್ಲಿ ಭಾರತದ ಕರಾವಳಿಗೆ ಅಪ್ಪಳಿಸಲು ತಯಾರಾಗ್ತಿದೆ. ಶನಿವಾರ ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿಗೆ ರೀಚ್ ಆಗೋ ಸಾಧ್ಯತೆ ಇದೆ. ಇದರ ಪರಿಣಾಮ ಈ ಪ್ರದೇಶದಲ್ಲಿ ಮೂರು ದಿನಗಳ ಮಟ್ಟಿಗೆ ರೈಲುಗಳ ಓಡಾಟ ನಿಲ್ಲಿಸಲಾಗಿದೆ. ಒಡಿಶಾದಲ್ಲಿ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಕಟ್ಟೆಚ್ಚರ ಸಾರಲಾಗಿದೆ. ಆಂಧ್ರದ ಶ್ರೀಕಾಕುಳಂ, ವಿಶಾಖಪಟ್ಟಣಂ ಹಾಗೂ ವಿಜಯನಗರಗಳಲ್ಲಿ ಭಾರೀ ಮಳೆಯಾಗೋ ಸಾಧ್ಯತೆ ಇದೆ. ಡಿಸೆಂಬರ್ 3-4ರಂದು ಜವಾದ್ ಚಂಡಮಾರುತದ ಪರಿಣಾಮ ಜೋರಾಗೆ ಅನುಭವ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಪಶ್ಚಿಮ ಬಂಗಾಳ, ಒಡಿಶಾ, ಆಂಧ್ರಕ್ಕೆ NDRF ಟೀಂಗಳನ್ನ ರವಾನಿಸಲಾಗಿದೆ.

-masthmagaa.com

Contact Us for Advertisement

Leave a Reply