2024ಕ್ಕೆ ಕೇಂದ್ರದಲ್ಲಿ ಬಿಜೆಪಿಯೇತರ ಪಕ್ಷಗಳು ಅಧಿಕಾರಕ್ಕೆ ಬಂದರೆ…? ನಿತೀಶ್‌ ಕುಮಾರ್‌ ಹೇಳಿದ್ದೇನು?

masthmagaa.com:

2024ಕ್ಕೆ ಕೇಂದ್ರದಲ್ಲಿ ಬಿಜೆಪಿಯೇತರ ಪಕ್ಷಗಳು ಅಧಿಕಾರಕ್ಕೆ ಬಂದರೆ ದೇಶದ ಎಲ್ಲ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ನೀಡಲಾಗುತ್ತೆ ಅಂತ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಮಗೆ ಸರ್ಕಾರ ರಚಿಸೋಕೆ ಅವಕಾಶ ಸಿಕ್ಕರೆ, ನಾವು ಖಂಡಿತವಾಗಿಯೂ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ನೀಡುತ್ತೇವೆ. ನಾನು ಕೇವಲ ಬಿಹಾರದ ಬಗ್ಗೆ ಮಾತ್ರ ಮಾತನಾಡುತ್ತಿಲ್ಲ, ವಿಶೇಷ ಸ್ಥಾನಮಾನ ಪಡೆಯಬೇಕಾಗಿರೋ ಇತರೆ ರಾಜ್ಯಗಳ ಕುರಿತೂ ಹೇಳುತ್ತಿದ್ದೇನೆ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply