ದೇಶದಲ್ಲಿ ಸತತ 8ನೇ ದಿನ 3,000ಕ್ಕೂ ಹೆಚ್ಚು ಜನರಿಗೆ ಸೋಂಕು..!

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,722 ಮಂದಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, 134‬ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 78,003ಕ್ಕೆ ಏರಿಕೆಯಾಗಿದೆ.

ಇದುವರೆಗೆ 2,549 ಮಂದಿ ಕೊರೋನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. 26,235 ಮಂದಿ ಗುಣಮುಖರಾಗಿದ್ದಾರೆ. ವಿವಿಧ ಆಸ್ಪತ್ರೆಗಳಲ್ಲಿ ಇನ್ನೂ 49,219 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 25 ಸಾವಿರ ದಾಟಿದೆ. ನಂತರದ ಸ್ಥಾನದಲ್ಲಿ ಗುಜರಾತ್, ತಮಿಳುನಾಡು, ದೆಹಲಿ ಮತ್ತು ರಾಜಸ್ಥಾನ ಇದೆ. ರಾಜ್ಯವಾರು ಪಟ್ಟಿಯಲ್ಲಿ ಕರ್ನಾಟಕ 13ನೇ ಸ್ಥಾನದಲ್ಲಿದೆ.

ಕಳೆದ 8 ದಿನದ ಪ್ರಕರಣಗಳು:

ಮೇ 7: 3,561 (81 ಸಾವು)

ಮೇ 8: 3,390 (103 ಸಾವು)

ಮೇ 9: 3,320 (95 ಸಾವು)

ಮೇ 10: 3,277 (128 ಸಾವು)

ಮೇ 11: 4,231 (97 ಸಾವು)

ಮೇ 12: 3,604 (87 ಸಾವು)

ಮೇ 13: 3,525 (122 ಸಾವು)

ಮೇ 14: 3,722 (134 ಸಾವು)

-masthmagaa.com

Contact Us for Advertisement

Leave a Reply