masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,967 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 100 ಜನ ಪ್ರಾಣ ಕಳೆದುಕೊಂಡಿದ್ದಾರೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 81,970ಕ್ಕೆ ಏರಿಕೆಯಾಗಿದೆ.

ಇದುವರೆಗೆ 2,649 ಮಂದಿ ಕೊರೋನಾಗೆ ಸಂಬಂಧಿಸಿದಂತೆ ಪ್ರಾಣ ಕಳೆದುಕೊಂಡಿದ್ದಾರೆ. 27,920 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ದೇಶದ ವಿವಿಧ ಆಸ್ಪತ್ರೆಗಳಲ್ಲಿ 51,401 ಮಂದಿ ಕಾಯಿಲೆ ಪೀಡಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ದೇಶದಲ್ಲಿರುವ ಆ್ಯಕ್ಟಿವ್ ಪ್ರಕರಣಗಳಾಗಿವೆ.

ಮಹಾರಾಷ್ಟ್ರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಬರೋಬ್ಬರಿ 27 ಸಾವಿರ ದಾಟಿದ್ದು, ಒಂದೇ ರಾಜ್ಯದಲ್ಲಿ ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ತಮಿಳುನಾಡು, ಗುಜರಾತ್, ದೆಹಲಿ ಮತ್ತ ರಾಜಸ್ಥಾನ ನಂತರದ ಸ್ಥಾನದಲ್ಲಿವೆ. ಈ ಪಟ್ಟಿಯಲ್ಲಿ ಕರ್ನಾಟಕ 13ನೇ ಸ್ಥಾನದಲ್ಲಿದೆ.

-masthmagaa.com

Contact Us for Advertisement

Leave a Reply