masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 55,079 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು 876 ಸೋಂಕಿತರು ಮೃತಪಟ್ಟಿದ್ದಾರೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 27.02 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 51,797 ಆಗಿದೆ. 

ಕಳೆದ 24 ಗಂಟೆಗಳಲ್ಲಿ 57,000+ ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 19.77 ಲಕ್ಷ ದಾಟಿದ್ದು, 6.73 ಲಕ್ಷ ಸೋಂಕಿತರು ಇನ್ನೂ ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 73.18% ಇದ್ದು, ಸಾವಿನ ಪ್ರಮಾಣ 1.92% ಇದೆ. ಆಗಸ್ಟ್​ 17ರಂದು ದೇಶದಲ್ಲಿ ದಾಖಲೆಯ 8.99 ಲಕ್ಷ ಸ್ಯಾಂಪಲ್​ಗಳನ್ನ ಪರೀಕ್ಷಿಸಲಾಗಿದೆ. ಇದುವರೆಗೆ 3.09 ಕೋಟಿ ಸ್ಯಾಂಪಲ್​ಗಳನ್ನ ಪರೀಕ್ಷೆ ಮಾಡಲಾಗಿದೆ ಅಂತ ಐಸಿಎಂಆರ್ ತಿಳಿಸಿದೆ. ದೇಶದಲ್ಲಿ ಪಾಸಿಟಿವಿಟಿ ರೇಟ್ 8.81% ಇದೆ. ಅಂದ್ರೆ ಕೊರೋನಾ ಪರೀಕ್ಷೆ ನಡೆಸಿದ ಪ್ರತಿ 100 ಜನರಲ್ಲಿ 8 ಮಂದಿಗೆ ಸೋಂಕು ದೃಢಪಡುತ್ತಿದೆ ಅಂತ ಅರ್ಥ.

ಸತತ 14ನೇ ದಿನವೂ ಭಾರತದಲ್ಲಿ ಅಮೆರಿಕ ಮತ್ತು ಬ್ರೆಜಿಲ್​ಗಿಂತ ಹೆಚ್ಚು ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಜಾಗತಿಕ ಸೋಂಕಿತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ 35,000ಕ್ಕೂ ಹೆಚ್ಚು ಮತ್ತು ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್​ನಲ್ಲಿ 19,000ಕ್ಕೂ ಹೆಚ್ಚು ಪ್ರಕರಣ ದೃಢಪಟ್ಟಿದೆ. ಭಾರತದಲ್ಲಿ 55,000ಕ್ಕೂ ಹೆಚ್ಚು ಪ್ರಕರಣ ದೃಢಪಟ್ಟಿದೆ.

-masthmagaa.com

Contact Us for Advertisement

Leave a Reply