masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 64,531 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು 1,092 ಸೋಂಕಿತರು ಮೃತಪಟ್ಟಿದ್ದಾರೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 27.67 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 52,889 ಆಗಿದೆ. 

ಕಳೆದ 24 ಗಂಟೆಗಳಲ್ಲಿ ದಾಖಲೆಯ 60,000+ ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 20.37 ಲಕ್ಷ ದಾಟಿದ್ದು, 6.76 ಲಕ್ಷ ಸೋಂಕಿತರು ಇನ್ನೂ ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 73.64% ಇದ್ದು, ಸಾವಿನ ಪ್ರಮಾಣ 1.91% ಇದೆ. ಆಗಸ್ಟ್​ 18ರಂದು ದೇಶದಲ್ಲಿ 8.01 ಲಕ್ಷ ಸ್ಯಾಂಪಲ್​ಗಳನ್ನ ಪರೀಕ್ಷಿಸಲಾಗಿದೆ. ಇದುವರೆಗೆ 3.17 ಕೋಟಿ ಸ್ಯಾಂಪಲ್​ಗಳನ್ನ ಪರೀಕ್ಷೆ ಮಾಡಲಾಗಿದೆ ಅಂತ ಐಸಿಎಂಆರ್ ತಿಳಿಸಿದೆ.

ಸತತ 15ನೇ ದಿನವೂ ಭಾರತದಲ್ಲಿ ಅಮೆರಿಕ ಮತ್ತು ಬ್ರೆಜಿಲ್​ಗಿಂತ ಹೆಚ್ಚು ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಜಾಗತಿಕ ಸೋಂಕಿತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ 44,000ಕ್ಕೂ ಹೆಚ್ಚು ಮತ್ತು ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್​ನಲ್ಲಿ 47,000ಕ್ಕೂ ಹೆಚ್ಚು ಪ್ರಕರಣ ದೃಢಪಟ್ಟಿದೆ. ಭಾರತದಲ್ಲಿ 64,000ಕ್ಕೂ ಹೆಚ್ಚು.

-masthmagaa.com

Contact Us for Advertisement

Leave a Reply