ದೇಶದಲ್ಲಿ 1,45,000 ಜನರಿಗೆ ಕೊರೋನಾ.. 4,000 ಜನ ಸಾವು..!

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,535 ಜನರಿಗೆ ಹೊಸದಾಗಿ ಸೋಂಕು ತಗುಲಿದೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ನಿನ್ನೆ ದಾಖಲೆಯ 6,977 ಜನರಿಗೆ ಸೋಂಕು ತಗುಲಿತ್ತು. ಈ ಮೂಲಕ ಕಳೆದ ಮೂರ್ನಾಲ್ಕು ದಿನಗಳಿಂದ ಹೊಸ ಹೊಸ ದಾಖಲೆ ಬರೆಯುತ್ತಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ತುಸು ಕಮ್ಮಿಯಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,45,380ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 146 ಜನ ಮೃತಪಟ್ಟಿದ್ದು, ದೇಶದಲ್ಲಿ ಒಟ್ಟು ಬಲಿಯಾದವರ ಸಂಖ್ಯೆ 4,167 ಆಗಿದೆ. ಇದುವರೆಗೆ 60,491 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದ ವಿವಿಧ ಆಸ್ಪತ್ರೆಗಳಲ್ಲಿ 80,722‬‬ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಬರೋಬ್ಬರಿ 52 ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. ತಮಿಳುನಾಡಿನಲ್ಲಿ 17 ಸಾವಿರ, ಗುಜರಾತ್​ ಮತ್ತು ದೆಹಲಿಯಲ್ಲಿ ತಲಾ 14 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದೃಢಪಟ್ಟಿವೆ. ರಾಜ್ಯವಾರು ಪಟ್ಟಿಯಲ್ಲಿ ಕರ್ನಾಟಕ 11ನೇ ಸ್ಥಾನದಲ್ಲಿದೆ.

-masthmagaa.com

Contact Us for Advertisement

Leave a Reply