masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,566 ಜನರಿಗೆ ಹೊಸದಾಗಿ ಸೋಂಕು ತಗುಲಿದೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ನಿನ್ನೆ 6,387.. ಇವತ್ತು 6,566.. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,58,333ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 194 ಜನ ಮೃತಪಟ್ಟಿದ್ದು, ದೇಶದಲ್ಲಿ ಒಟ್ಟು ಬಲಿಯಾದವರ ಸಂಖ್ಯೆ 4,531 ಆಗಿದೆ. ಮೇ 5ರಂದು 195 ಮಂದಿ ಮೃತಪಟ್ಟಿದ್ದರು. ಇದೇ ಈವರೆಗಿನ ಹೈಯೆಸ್ಟ್. ಇದೀಗ 194 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಸದ್ಯ 67,692 ಮಂದಿ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ 86,110 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಬರೋಬ್ಬರಿ 56 ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. ತಮಿಳುನಾಡಿನಲ್ಲಿ 18 ಸಾವಿರ, ಗುಜರಾತ್​ ಮತ್ತು ದೆಹಲಿಯಲ್ಲಿ ತಲಾ 15 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದೃಢಪಟ್ಟಿವೆ. ರಾಜ್ಯವಾರು ಪಟ್ಟಿಯಲ್ಲಿ ಕರ್ನಾಟಕ 11ನೇ ಸ್ಥಾನದಲ್ಲಿದೆ.

-masthmagaa.com

Contact Us for Advertisement

Leave a Reply