masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 68,898 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು 983 ಸೋಂಕಿತರು ಮೃತಪಟ್ಟಿದ್ದಾರೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29.05 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 54,849 ಆಗಿದೆ. 

ಕಳೆದ 24 ಗಂಟೆಗಳಲ್ಲಿ ದಾಖಲೆಯ 62,000+ ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 21.58 ಲಕ್ಷ ದಾಟಿದ್ದು, 6.92 ಲಕ್ಷ ಸೋಂಕಿತರು ಇನ್ನೂ ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 74.43% ಇದ್ದು, ಸಾವಿನ ಪ್ರಮಾಣ 1.89% ಇದೆ. ಆಗಸ್ಟ್​ 20ರಂದು ದೇಶದಲ್ಲಿ 8.05 ಲಕ್ಷ ಸ್ಯಾಂಪಲ್​ಗಳನ್ನ ಪರೀಕ್ಷಿಸಲಾಗಿದೆ. ಇದುವರೆಗೆ 3.34 ಕೋಟಿ ಸ್ಯಾಂಪಲ್​ಗಳನ್ನ ಪರೀಕ್ಷೆ ಮಾಡಲಾಗಿದೆ ಅಂತ ಐಸಿಎಂಆರ್ ತಿಳಿಸಿದೆ.

ಸತತ 17ನೇ ದಿನವೂ ಭಾರತದಲ್ಲಿ ಅಮೆರಿಕ ಮತ್ತು ಬ್ರೆಜಿಲ್​ಗಿಂತ ಹೆಚ್ಚು ಕೊರೋನಾ ಪ್ರಕರಣ ದೃಢಪಟ್ಟಿದೆ. ಜಾಗತಿಕ ಸೋಂಕಿತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ 44,000ಕ್ಕೂ ಹೆಚ್ಚು ಮತ್ತು ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್​ನಲ್ಲಿ 45,000ಕ್ಕೂ ಹೆಚ್ಚು ಪ್ರಕರಣ ದೃಢಪಟ್ಟಿದೆ. ಭಾರತದಲ್ಲಿ 68,000ಕ್ಕೂ ಹೆಚ್ಚು.

-masthmagaa.com

Contact Us for Advertisement

Leave a Reply