ಜೂನ್​ 1ರ ಹೆಲ್ತ್​ ಬುಲೆಟಿನ್: ಜರ್ಮನಿ, ಫ್ರಾನ್ಸ್​ ಮೀರಿಸಿದ ಭಾರತ

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 8,392 ಜನರಿಗೆ ಹೊಸದಾಗಿ ಸೋಂಕು ತಗುಲಿದೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಒಂದೇ ದಿನದಲ್ಲಿ ಇಷ್ಟು ಜನರಿಗೆ ಸೋಂಕು ತಗುಲಿರೋದು ಇದೇ ಮೊದಲು. ಮೇ 31ರಂದು ಅಂದ್ರೆ ನಿನ್ನೆ 8,380 ಜನರಿಗೆ ಸೋಂಕು ತಗುಲಿತ್ತು. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,90,535ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಜಾಗತಿಕ ಸೋಂಕಿತರ ಪಟ್ಟಿಯಲ್ಲಿ ಜರ್ಮನಿ ಮತ್ತು ಫ್ರಾನ್ಸ್​ ದೇಶಗಳನ್ನ ಮೀರಿಸಿರೋ ಭಾರತ 9ನೇ ಸ್ಥಾನದಿಂದ 7ನೇ ಸ್ಥಾನಕ್ಕೆ ಬಂದಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಬರೋಬ್ಬರಿ 230 ಜನ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಮೃತಪಟ್ಟ ಸೋಂಕಿತರ ಸಂಖ್ಯೆ 5,394 ಆಗಿದೆ. ಸದ್ಯ 91,819 ಮಂದಿ ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ 93,322 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಬರೋಬ್ಬರಿ 67 ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. ತಮಿಳುನಾಡಿನಲ್ಲಿ 22 ಸಾವಿರ, ದೆಹಲಿಯಲ್ಲಿ 19 ಸಾವಿರ ಮತ್ತು ಗುಜರಾತ್​ನಲ್ಲಿ 16 ಸಾವಿರಕ್ಕೂ ಹೆಚ್ಚು​ ಪ್ರಕರಣಗಳು ದೃಢಪಟ್ಟಿವೆ. ರಾಜ್ಯವಾರು ಪಟ್ಟಿಯಲ್ಲಿ ಕರ್ನಾಟಕ 11ನೇ ಸ್ಥಾನದಲ್ಲಿ ಮುಂದುವರಿದಿದೆ.

-masthmagaa.com

Contact Us for Advertisement

Leave a Reply