ರಾಜ್ಯ ಆರೋಗ್ಯ ಇಲಾಖೆ ಭ್ರಷ್ಟಾಚಾರದ ರಾಜನಿದ್ದಂತೆ: ಕೆಂಪಣ್ಣ ಆರೋಪ

masthmagaa.com:

ರಾಜ್ಯ ಸರ್ಕಾರದಲ್ಲಿ ಆರೋಗ್ಯ ಇಲಾಖೆ ಭ್ರಷ್ಟಾಚಾರದ ರಾಜನಿದ್ದಂತೆ. ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಭಾರಿ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಅಂತ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಗಂಭೀರ ಆರೋಪ ಮಾಡಿದ್ದಾರೆ. ಜೊತೆಗೆ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಸಿಎಂ ಕಚೇರಿಯಲ್ಲೇ ಭ್ರಷ್ಟಾಷಾರ ತಾಂಡವವಾಡ್ತಿದೆ. ರಾಜ್ಯದಲ್ಲಿ ನಡೆಯುವ ಕಾಮಗಾರಿಗಳಿಗೆ 40 ಪರ್ಸೆಂಟ್​​ ಕಮಿಷನ್ ನೀಡಿದ್ರೆ, ಬಿಬಿಎಂಪಿ ವ್ಯಾಪ್ತಿಯಲ್ಲಿನ ಕಾಮಗಾರಿಗಳಿಗೆ 50 ಪರ್ಸೆಂಟ್​​ ಕಮಿಷನ್ ನೀಡಬೇಕಾಗಿದೆ ಅಂತ ಗುತ್ತಿಗೆದಾರರ ಸಂಘ ಆರೋಪಿಸಿದೆ. ತಮ್ಮ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಮಂತ್ರಿ ಸುಧಾಕರ್, ಜವಾಬ್ದಾರಿಯುತ ಸ್ಥಾನದಲ್ಲಿರೋ ಕೆಂಪಣ್ಣ ಪುರಾವೆ ಇಟ್ಟುಕೊಂಡು ಸರ್ಕಾರದ ವಿರುದ್ಧ ಆರೋಪ ಮಾಡಬೇಕು. ಕೆಂಪಣ್ಣರನ್ನ ಕಪ್ಪು ಪಟ್ಟಿಗೆ ಸೇರಿಸಬೇಕು ಅಂತ ನಾನು ಸರ್ಕಾರಕ್ಕೆ ಆಗ್ರಹಿಸ್ತೀನಿ. ಕೆಂಪಣ್ಣ ವಿರುದ್ಧ ವೈಯಕ್ತಿಕವಾಗಿ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ಇದೆಲ್ಲದರ ಹಿಂದೆ ಕಾಂಗ್ರೆಸ್​ ಕೈವಾಡ ಇದೆ. 40 ಪರ್ಸೆಂಟ್ ಕಮಿಷನ್​ ಎಲ್ಲಾದ್ರೂ ಸಾಧ್ಯ ಇದಿಯಾ ಅಂತ ಸುಧಾಕರ್​ ಪ್ರಶ್ನೆ ಮಾಡಿದ್ದಾರೆ.

-masthmagaa.com

Contact Us for Advertisement

Leave a Reply