ಸೂಲಿಬೆಲೆ ವಾಟ್ಸಾಪ್‌ ಯೂನಿವರ್ಸಿಟಿಯಿಂದ ಬಂದವರು: ಪ್ರಿಯಾಂಕ್‌ ಖರ್ಗೆ

masthmagaa.com:

ನಾನು ಚಕ್ರವರ್ತಿ ಸೂಲಿಬೆಲೆ ಬರೆದಿರುವ ಪಠ್ಯವನ್ನ ಓದಿಲ್ಲ. ಅವ್ರು ಬರೆದಿರೋ ಪಠ್ಯ ನಮ್ಮ ಮಕ್ಕಳು ಓದೋದು ಬೇಡ. ಯಾವ ಆಧಾರದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಪಾಠ ಪುಸ್ತಕದಲ್ಲಿ ಸೇರ್ಪಡೆ ಮಾಡಿದ್ದಾರೆ ಅಂತ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಜೊತೆಗೆ ಬಾಡಿಗೆ ಭಾಷಣಕಾರರನ್ನೆಲ್ಲ ನೀವು ಲೇಖಕರು, ಸಾಹಿತಿಗಳು ಮಾಡಿದ್ದೀರಿ. ಅದನ್ನು ನಮ್ಮ ಮಕ್ಕಳು ಓದಬೇಕಾ? ಕರ್ನಾಟಕ ಸಾಹಿತ್ಯಕ್ಕೆ ಅಷ್ಟು ಬರ ಬಂದಿದೆಯಾ? ಯಾರು ಇವರೆಲ್ಲಾ? ವಾಟ್ಸಪ್ ಯೂನಿವರ್ಸಿಟಿಯಲ್ಲಿ ಓದಿರೋರು ಎಲ್ಲಾ ಪಠ್ಯ ರಚನೆ ಮಾಡಲು ಪ್ರಾರಂಭಿಸಿದ್ದಾರೆ. ಇನ್ನು ಅಂತಹ ಪಾಠಗಳನ್ನ ನಮ್ಮ ಮಕ್ಕಳು ಕಲಿತರೆ ಮಕ್ಕಳ ಭವಿಷ್ಯ ಏನಾಗಬೇಕು ಅಂತ ಸೂಲಿಬೆಲೆ ವಿರುದ್ಧ ಪ್ರಿಯಾಂಕ್ ಕಿಡಿಕಾರಿದ್ದಾರೆ. ಜೊತೆಗೆ ಸೂಲಿಬೆಲೆಯವ್ರು ಭಗತ್‌ಸಿಂಗ್, ಸುಖದೇವ್‌ರ ಬಗ್ಗೆ ಬರೆದಿರೋದು ಅನ್ನೋ ಪ್ರಶ್ನೆಗೆ ಪ್ರತಿಕ್ರಿಯಿಸಿರೋ ಪ್ರಿಯಾಂಕ್‌, ಭಗತ್ ಸಿಂಗ್ ಬಗ್ಗೆ ಅಪಾರವಾದ ಗೌರವವಿದೆ. ಅವರ ನಿಜವಾದ ಇತಿಹಾಸ ನಾವು ಹೇಳುತ್ತೇವೆ. ನಾನು ನಾಸ್ತಿಕ ಏಕೆ ಆಗಿದ್ದೇನೆ ಅನ್ನೊ ಭಗತ್ ಸಿಂಗ್‌ರ ಪುಸ್ತಕವಿದೆ. ಸೂಲಿಬೆಲೆ ಅದನ್ನ ಓದಲಿ ಸಾಕು. ಇತಿಹಾಸ ತಿರುಚಿಲ್ಲದ ಪಾಠ ನಾವು ಇಡುತ್ತೇವೆ ಅಂತ ವಾಗ್ದಾಳಿ ನಡೆಸಿದ್ದಾರೆ.

-masthmagaa.com

Contact Us for Advertisement

Leave a Reply