ಜಾಮೀನು ರದ್ದು: 4 ತಿಂಗಳ ನ್ಯಾಯಾಂಗ ಬಂಧನದಲ್ಲಿ ಮುರುಘಾ ಶ್ರೀ!

masthmagaa.com:

ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ ಕೊಟ್ಟ ಆರೋಪ ಎದುರಿಸ್ತಿರೋ ಚಿತ್ರದುರ್ಗದ ಮುರುಘಾ ಶ್ರೀಗೆ ಸುಪ್ರೀಂ ಕೋರ್ಟ್‌ ಬಿಗ್‌ ಶಾಕ್‌ ಕೊಟ್ಟಿದೆ. ಜಾಮೀನು ರದ್ದುಗೊಳಿಸಿ 4 ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಮಹತ್ವದ ಆದೇಶ ನೀಡಿದೆ. ಅಲ್ದೇ ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ನೀಡಲಾಗಿದ್ದು, ವಿಶೇಷ ಕೋರ್ಟ್​ನಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆ ಮಾಡ್ಬೇಕು ಅಂತ ‘ಸುಪ್ರೀಂ’ ಆದೇಶಿಸಿದೆ. ಹಾಗೇ ಇನ್ನು 4 ತಿಂಗಳಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಬಂಧನದ ಅವಧಿಯನ್ನು ಇನ್ನೆರಡು ತಿಂಗಳ ಕಾಲ ವಿಸ್ತರಣೆ ಮಾಡೊ ಸಾಧ್ಯತೆ ಇದೆ ಎನ್ನಲಾಗಿದೆ. ಅಂದ್ಹಾಗೆ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಫೋಕ್ಸೊ ಕಾಯ್ದೆಯಡಿ ಅರೆಸ್ಟ್‌ ಆಗಿದ್ದ ಮುರುಘಾ ಶ್ರೀಗೆ ಹೈಕೋರ್ಟ್‌ ಷರತ್ತು ಬದ್ದ ಜಾಮೀನು ನೀಡಿತ್ತು. ಇದನ್ನ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಅರ್ಜಿಯೊಂದು ಸಲ್ಲಿಕೆಯಾಗಿತ್ತು. ಹೀಗಾಗಿ ಇದ್ರ ವಿಚಾರಣೆ ನಡೆಸಿದ ಸುಪ್ರೀಂ, ಶ್ರೀಗಳಿಗೆ ಜಾಮೀನು ರದ್ದುಗೊಳಿಸಿ ಈ ಆದೇಶ ನೀಡಿದೆ.

-masthmagaa.com

Contact Us for Advertisement

Leave a Reply