ಅನರ್ಹ ಶಾಸಕರಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್..!

ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್ ಮತ್ತೆ ಶಾಕ್ ಕೊಟ್ಟಿದೆ. ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಬುಧವಾರಕ್ಕೆ ಮುಂದೂಡಿದೆ. ಇಂದು ವಿಚಾರಣೆ ನಡೆಸಿದ ನ್ಯಾ.ರಮಣ ನೇತೃತ್ವದ ಪೀಠ, ವಾದ- ಪ್ರತಿವಾದ ಆಲಿಸಿತು. ಅನರ್ಹ ಶಾಸಕರ ಪರ ವಾದ ಮಂಡಿಸಿದ ಮುಕುಲ್ ರೋಹ್ಟಗಿ, ರಾಜೀನಾಮೆ ನೀಡಿದ್ದರೂ ಶಾಸಕರನ್ನು ಅನರ್ಹಗೊಳಿಸಲಾಗಿದೆ. ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ನಿರ್ಧಾರ ಕಾನೂನು ಬಾಹಿರ. ಉಪಚುನಾವಣೆಗೆ ತಡೆ ನೀಡಬೇಕು ಎಂದು ಮನವಿ ಮಾಡಿದ್ರು.

ಈ ನಡುವೆ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಬಹುದು. ಅದಕ್ಕೆ ಯಾವುದೇ ಆಕ್ಷೇಪ ಇಲ್ಲ ಎಂದು ಚುನಾವಣಾ ಆಯೋಗ ಸುಪ್ರೀಂಕೋರ್ಟ್‍ಗೆ ತಿಳಿಸಿದ್ದಾರೆ. ಆದ್ರೆ ಇದಕ್ಕೆ ಕಪಿಲ್ ಸಿಬಲ್ ಆಕ್ಷೇಪ ವ್ಯಕ್ತಪಡಿಸಿದ್ದು, ನಿಮ್ಮ ಅಭಿಪ್ರಾಯವನ್ನು ಸುಪ್ರೀಂಕೋರ್ಟ್ ಕೇಳಿಲ್ಲ. ಸ್ವಪ್ರೇರಣೆಯಿಂದ ಚುನಾವಣೆ ಆಯೋಗ ಹೇಳಿಕೆ ನೀಡುವಂತಿಲ್ಲ ಎಂದು ಹೇಳಿದ್ದಾರೆ. ವಾದ-ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ. ಈ ಮೂಲಕ ಸೋಮವಾರ ಎಲ್ಲವೂ ಸರಿಯಾಗುತ್ತೆ ಎಂದು ಕಾದು ಕುಳಿತಿದ್ದ ಅನರ್ಹ ಶಾಸಕರಿಗೆ ಶಾಕ್ ಕೊಟ್ಟಿದೆ.

ಜೊತೆಗೆ ತಮ್ಮನ್ನೂ ಪ್ರತಿವಾದಿಗಳನ್ನಾಗಿ ಮಾಡಿ ಎಂದು ಕೇವಿಯಟ್ ಸಲ್ಲಿಸಿದ್ದ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ಕೋರ್ಟ್ ನೋಟಿಸ್ ಕೊಟ್ಟಿದೆ.

Contact Us for Advertisement

Leave a Reply