ಮೋದಿ ಸರ್‌ನೇಮ್‌ ಪ್ರಕರಣ: ಜುಲೈ 21ಕ್ಕೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

masthmagaa.com:

ಮೋದಿ ಸರ್‌ನೇಮ್‌ಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದ ಮೇಲ್ಮನವಿಯನ್ನ ಜುಲೈ 21 ರಂದು ವಿಚಾರಣೆ ನಡೆಸೋದಾಗಿ ಸುಪ್ರೀಂಕೋರ್ಟ್‌ ಹೇಳಿದೆ. ಅಂದ್ಹಾಗೆ ಮಾನನಷ್ಟ ಮೊಕದ್ದಮೆ ಅಡಿಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಸೂರತ್‌ ಕೋರ್ಟ್‌ ತೀರ್ಪು ನೀಡಿತ್ತು. ಈ ಆದೇಶವನ್ನ ತಡೆಯುವಂತೆ ಗುಜರಾತ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ರು. ಆದ್ರೆ ಸೂರತ್​ ನ್ಯಾಯಾಲಯದ ಆದೇಶವನ್ನು ತಡೆಹಿಡಿಯಲು ಗುಜರಾತ್‌ ಹೈಕೋರ್ಟ್‌ ನಿರಾಕರಿಸಿತ್ತು. ಈ ಆದೇಶವನ್ನ ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ರು. ಇದೀಗ ಸುಪ್ರೀಂಕೋರ್ಟ್‌ ವಿಚಾರಣೆ ನಡೆಸೋದಾಗಿ ಹೇಳಿದೆ.

-masthmagaa.com

Contact Us for Advertisement

Leave a Reply