ಸುಶಾಂತ್ ಪ್ರಕರಣ: ಬಿಹಾರ ಪೊಲೀಸರನ್ನ ಕ್ವಾರಂಟೈನ್​ ಮಾಡಿದ್ದಕ್ಕೆ ಸುಪ್ರೀಂಕೋರ್ಟ್ ಗರಂ

masthmagaa.com:

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ವಿಚಾರಣೆ ನಡೆಸಲು ಬಿಹಾರದಿಂದ ಮುಂಬೈಗೆ ಬಂದಿದ್ದ ಪೊಲೀಸ್ ಅಧಿಕಾರಿಯನ್ನು ಕ್ವಾರಂಟೈನ್​ನಲ್ಲಿ ಇಟ್ಟಿದ್ದು ಸರಿಯಲ್ಲ. ಇದು ಸಮಾಜಕ್ಕೆ ಒಳ್ಳೆಯ ಸಂದೇಶ ರವಾನಿಸುವುದಿಲ್ಲ ಅಂತ ಸುಪ್ರೀಂಕೋರ್ಟ್ ಮಹಾರಾಷ್ಟ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಜೊತೆಗೆ ಮುಂಬೈ ಪೊಲೀಸರು ತನಿಖೆಯ ವಾಸ್ತವ ಸ್ಥಿತಿ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ.

ಬಿಹಾರದ ಪಾಟ್ನಾದಲ್ಲಿ ದಾಖಲಾಗಿರುವ ದೂರಿನ ವಿಚಾರಣೆಯನ್ನು ಮುಂಬೈಗೆ ಸ್ಥಳಾಂತರಿಸಬೇಕು ಅಂತ ರಿಹಾ ಚಕ್ರವರ್ತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ, ಮಹಾರಾಷ್ಟ್ರ ಮತ್ತು ಕೇಂದ್ರ ಸರ್ಕಾರಗಳು ವಾಸ್ತವ ಸ್ಥಿತಿ ವರದಿ ಮತ್ತು ರಿಹಾ ಚಕ್ರಬರ್ತಿಯ ಅರ್ಜಿಗೆ ಸಂಬಂಧಿಸಿದಂತೆ ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ ಮೂರು ದಿನಗಳ ಒಳಗೆ ಪ್ರತಿಕ್ರಿಯೆ ಸಲ್ಲಿಸಬೇಕು ಅಂತ ಸೂಚಿಸಿದೆ.

ಇನ್ನು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂಬ ಬಿಹಾರ ಸರ್ಕಾರದ ಮನವಿಯನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ ಅಂತ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂಕೋರ್ಟ್​ಗೆ ಹೇಳಿದ್ದಾರೆ. ಮತ್ತೊಂದುಕಡೆ ಸಾಕ್ಷ್ಯಗಳನ್ನು ನಾಶ ಪಡಿಸುವ ಉದ್ದೇಶದಿಂದಲೇ ಬಿಹಾರ ಪೊಲೀಸರನ್ನು ಕ್ವಾರಂಟೈನ್​ನಲ್ಲಿ ಇಡಲಾಗಿದೆ ಅಂತ ಸುಶಾಂತ್ ಸಿಂಗ್ ತಂದೆ ಪರ ವಕೀಲರಾದ ವಿಕಾಸ್ ಸಿಂಗ್ ಕೋರ್ಟ್​ಗೆ ಹೇಳಿದ್ದಾರೆ. ಮುಂದಿನ ವಿಚಾರಣೆಯು ಒಂದು ವಾರದ ಬಳಿಕ ನಡೆಯಲಿದೆ.

-masthmagaa.com

Contact Us for Advertisement

Leave a Reply