masthmagaa.com: ಖ್ಯಾತ ಉದ್ಯಮಿ ವಿಜಯ ಸಂಕೇಶ್ವರ ಅವರ ಜೀವನಾಧಾರಿತ ಚಿತ್ರ “ವಿಜಯಾನಂದ”. ಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಸಂಗೀತ ನೀಡಿರುವ ಈ ಚಿತ್ರದ “ಹಾಗೆ ಆದ ಆಲಿಂಗನ” ಎಂಬ ಹಾಡು ಬಿಡುಗಡೆಯಾಗಿದೆ. ಧನಂಜಯ್ ರಂಜನ್ ಬರೆದಿರುವ ಈ ಹಾಡನ್ನು ವಿಜಯ್ ಪ್ರಕಾಶ್ ಹಾಗೂ ಕೀರ್ತನಾ ವೈದ್ಯನಾಥನ್ ಇಂಪಾಗಿ ಹಾಡಿದ್ದಾರೆ. ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ಈ ಹಾಡು ಬಿಡುಗಡೆಯಾಯಿತು. ಮಲೆಯಾಳಂನ ಖ್ಯಾತ ಸಂಗೀತ ನಿರ್ದೇಶಕರಾದ ಗೋಪಿ ಸುಂದರ್, “ಗೀತಾ ಗೋವಿಂದಂ” ಸೇರಿದಂತೆ ಮುನ್ನೂರಕ್ಕೂ ಅಧಿಕ ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. ಕನ್ನಡದಲ್ಲಿ ಇದು ಮೊದಲ ಚಿತ್ರ. ಇಮ್ರಾನ್ ಸರ್ದಾರಿಯಾ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಹಾಡು ಬಿಡುಗಡೆ ಸಮಾರಂಭದಲ್ಲಿ ವಿಜಯ ಸಂಕೇಶ್ವರ ಚಿತ್ರದ ಕುರಿತು ಮಾತನಾಡಿದರು. ನನ್ನ‌ ಜೀವನಾಧಾರಿತ ಸಿನಿಮಾ ಮಾಡುವುದಾಗಿ ನಿರ್ದೇಶಕಿ ರಿಶಿಕಾ ಶರ್ಮ ಕೇಳಿದಾಗ, ಈ ಚಿಕ್ಕ ಹುಡುಗಿ ಏನು ಮಾಡುತ್ತಾಳೆ? ಅನಿಸಿತು. ಆದರೆ ಈಗ, ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ರಿಶಿಕಾ ಬಹಳ ಚೆನ್ನಾಗಿ ಸಿನಿಮಾ ಮಾಡಿದ್ದಾರೆ. ನನ್ನ ಮಗ ಆನಂದ್ ಈRead More →

masthmagaa.com:   ಶ್ರೀ ಆನಂದ ಸಂಕೇಶ್ವರ್ ರವರ ವಿ ಆರ್ ಎಲ್ ಫಿಲಂ ಪ್ರೊಡಕ್ಷನ್ಸ್ ಸಂಸ್ಥೆಯಡಿಯಲ್ಲಿ ನಿರ್ಮಿಸುತ್ತಿರುವ “ವಿಜಯಾನಂದ” ಚಲನಚಿತ್ರದಲ್ಲಿ ಕನ್ನಡದ ಮೇರು ನಟರಾದ ಶ್ರೀ ಅನಂತ ನಾಗ್ ರವರ ಪಾತ್ರ ಪರಿಚಯದ ಟೀಸರ್ ಬಿಡುಗಡೆ ಆಗಿದೆ. ಹಿರಿಯ ನಟರಾದ ಶ್ರೀ ಅನಂತ ನಾಗ್ “ವಿಜಯಾನಂದ” ಚಲನಚಿತ್ರದಲ್ಲಿ ಶ್ರೀ ವಿಜಯ ಸಂಕೇಶ್ವರ್ ರವರ ತಂದೆ ಬಿ ಜಿ ಸಂಕೇಶ್ವರ್ ರವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವುದು ಈ ಮೂಲಕ ದೃಢಪಟ್ಟಿದೆ. ಅನಂತ್ ನಾಗ್ ಹುಟ್ಟುಹಬ್ಬಕ್ಕೆ ಈ ವಿಶೇಷ ಟೀಸರ್ ಅನ್ನ ಚಿತ್ರತಂಡ ಬಿಡುಗಡೆ ಮಾಡಿದ್ದು ವಿಡಿಯೋ ದ ಲಿಂಕ್ ಕೆಳಗಿದೆ👇 -masthmagaa.com Share on: WhatsAppContact Us for AdvertisementRead More →

masthmagaa.com: ಇಲ್ಲಿ ಹುಟ್ಟಿಬೆಳೆದವರಷ್ಟೇ‌ ಅಲ್ಲದೇ ಬೇರೆ ‌ಊರಿನವರಿಗೂ ಆಶ್ರಯ ನೀಡಿ ತಾಯಿ ಸ್ಥಾನದಲ್ಲಿದೆ ನಮ್ಮ ಬೆಂಗಳೂರು. ಬೆಂಗಳೂರಿನ ಕುರಿತಂತೆ ಈಗ ಚಿತ್ರವೊಂದು ತಯಾರಾಗಿದೆ. ಈ ಚಿತ್ರದ ಹೆಸರು “ಮೇಡ್ ಇನ್ ಬೆಂಗಳೂರು”, ಸಧ್ಯ ಈ ಚಿತ್ರದ ಚಿತ್ರೀಕರಣ ಪೂರ್ಣವಾಗಿ , ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆ. ಕನ್ನಡ ಚಿತ್ರರಂಗದ ಪ್ರಮುಖ ನಟರಾದ ಅನಂತನಾಗ್, ಸಾಯಿಕುಮಾರ್‌ ಹಾಗೂ ಪ್ರಕಾಶ್ ಬೆಳವಾಡಿ ಮೂರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ನಾಯಕನಾಗಿ ಮಧುಸೂದನ್ ಗೋವಿಂದ್ ಅಭಿನಯಿಸಿದ್ದಾರೆ. ಪುನೀತ್ ಮಾಂಜ, ವಂಶಿಧರ್, ಹಿಮಾಂಶಿ ವರ್ಮ, ಸುಧಾ ಬೆಳವಾಡಿ, ಮಂಜುನಾಥ್ ಹೆಗ್ಡೆ, ಶಂಕರಮೂರ್ತಿ, ವಿನೀತ್, ರಮೇಶ್ ಭಟ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಪ್ರದೀಪ್ ಶಾಸ್ತ್ರಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನರ್ದೇಶಿಸಿದ್ದಾರೆ. ಈ ಚಿತ್ರದ ಶೀರ್ಷಿಕೆ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ಸಮಾರಂಭ ಇತ್ತೀಚೆಗೆ ನಗರದ ಖಾಸಗಿ ಹೋಟೆಲ್ ನಲ್ಲಿ ನೆರವೇರಿತು. ಮೊದಲಿಗೆ ಚಿತ್ರದ ಬಗ್ಗೆ ನಿರ್ದೇಶಕ ಪ್ರದೀಪ್ ಶಾಸ್ತ್ರಿ ಸಂಪೂರ್ಣ ವಿವರ ನೀಡಿದರು. ಕೆಲವು ತಿಂಗಳುಗಳ ಹಿಂದೆ ನಿರ್ಮಾಪಕ ಬಾಲಕೃಷ್ಣ ಮತ್ತು ನಿರ್ದೇಶಕ ಪ್ರದೀಪ್Read More →