ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ ಸಿಎಂ ಬಸವರಾಜ್ ಬೊಮ್ಮಾಯಿ! ಏಕೆ?
2022-11-28
masthmagaa.com: ಬೆಳಗಾವಿ ಗಡಿ ವಿವಾದದ ನಡುವೆಯೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದೆಹಲಿಗೆ ತೆರಳ್ತಾ ಇದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವ್ರ ಭೇಟಿಗೆ ಸದ್ಯದಲ್ಲೇ ದೆಹಲಿಗೆ ತೆರಳ್ತಾ ಇದ್ದೀನಿ. ಇದೇ ವೇಳೆ ಸುಪ್ರೀಂಕೋರ್ಟ್ ವಕೀಲರನ್ನ ಭೇಟಿಯಾಗಿ ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಚರ್ಚೆ ಮಾಡ್ತೀನಿ ಅಂತ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಬೊಮ್ಮಾಯಿ ಅವ್ರ ದೆಹಲಿ ಪ್ರವಾಸದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆಗೋ ಸಾಧ್ಯತೆ ಇದೆ. ವಿಧಾನಸಭೆ ಚುನಾವಣೆ ದೃಷ್ಟಿಯಿಂದ, ಖಾಲಿ ಇರುವ 6 ಸ್ಥಾನಗಳನ್ನ ತುಂಬಿ, ಹೊಸ ಮುಖಗಳಿಗೆ ಅವಕಾಶ ನೀಡೋ ಸಾಧ್ಯತೆ ಇದೆ ಅಂತ ಹೇಳಲಾಗ್ತಿದೆ. -masthmagaa.com Share on: WhatsAppContact Us for AdvertisementRead More →