ಫೆಭ್ರವರಿ 27ರಂದು ಬೆಳಗಾವಿಗೆ ಪ್ರಧಾನಿ ಮೋದಿ ಭೇಟಿ!
masthmagaa.com: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬಂದು ಹೋದ ಬೆನ್ನಲ್ಲೇ ಇದೀಗ ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದು, ಬಿ.ಎಸ್ ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿಯಲ್ಲಿ ಬೃಹತ್ ವೇದಿಕೆ ಸಿದ್ದವಾಗಿದೆ. ಕೃಷಿ ಇಲಾಖೆ ವೇದಿಕೆಯ ಮುಂಭಾಗವನ್ನು ಸಿರಿಧಾನ್ಯಗಳಿಂದ ಸಿಂಗಾರ ಮಾಡಲಾಗಿದೆ. ಹಾಗೇ ಪಿಎಂ ಕಿಸಾನ್, ಜಿ 20, ಅಂತರಾಷ್ಟ್ರೀಯ ಮಟ್ಟದ ಮಿಲೇಟ್ಸ್ ವರ್ಷದ ಚಿತ್ರಣಗಳ ಮೂರು ಲೋಗೋಗಳನ್ನ ಸಿರಿ ಧಾನ್ಯದಲ್ಲಿ ಬಿಡಿಸಲಾಗಿದೆ. -masthmagaa.com Share on: WhatsAppContact Us for AdvertisementRead More →