masthmagaa.com: ರಶ್ಮಿ ಫಿಲಂಸ್ ಲಾಂಛನದಲ್ಲಿ ಸುಮಂತ್ ಕ್ರಾಂತಿ ಅವರು ನಿರ್ಮಿಸುತ್ತಿರುವ “ದಿಲ್ ಪಸಂದ್” ಚಿತ್ರದ ಫಸ್ಟ್ ಲುಕ್ ಇತ್ತೀಚೆಗೆ ಬಿಡುಗಡೆಯಾಗಿದೆ. ಚಿತ್ರದ ಫಸ್ಟ್ ಲುಕ್ ಗೆ ಅಪಾರ ಜನಮನ್ನಣೆ ದೊರಕಿದೆ.‌ ಶಿವತೇಜಸ್ ನಿರ್ದೇಶನದ ಈ‌ ಚಿತ್ರದ ನಾಯಕರಾಗಿ ‌ಡಾರ್ಲಿಂಗ್ ಕೃಷ್ಣ ಅಭಿನಯಿಸಿಸುತ್ತಿದ್ದಾರೆ. ನಿಶ್ವಿಕನಾಯ್ಡು‌ ಹಾಗೂ ಮೇಘ ಶೆಟ್ಟಿ “ದಿಲ್ ಪಸಂದ್”ನ ನಾಯಕಿಯರು. ಸಾಧುಕೋಕಿಲ,‌‌ ರಂಗಾಯಣ ರಘು, ತಬಲ‌ ನಾಣಿ, ಅರುಣ ಬಾಲರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಈಗಾಗಲೇ ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಡಿಸೆಂಬರ್ ಮೊದಲವಾರದಲ್ಲಿ ದ್ವಿತೀಯ ಹಂತದ ‌ಚಿತ್ರೀಕರಣ‌ ಆರಂಭವಾಗಲಿದೆ. ಅರ್ಜುನ್ ಜನ್ಯರ ಸಂಗೀತ ನಿರ್ದೇಶನ, ಶೇಖರ್ ಚಂದ್ರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮರ ಸಾಹಸ ನಿರ್ದೇಶನ “ದಿಲ್ ಪಸಂದ್” ಚಿತ್ರಕ್ಕಿದೆ. -masthmagaa.com Share on: WhatsAppContact Us for AdvertisementRead More →

‌masthmagaa.com: ಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಚಂದ್ರು ಕಡ್ಡಿಪುಡಿ ನಿರ್ಮಿಸುತ್ತಿರುವ, ಡಾರ್ಲಿಂಗ್ ಕೃಷ್ಣ ನಾಯಕನಾಗಿ ಅಭಿನಯಿಸುತ್ತಿರುವ “Love ಬರ್ಡ್ಸ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಧರ್ಮಗಿರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ನೆರವೇರಿತು. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ನಿರ್ಮಾಪಕ ರಮೇಶ್ ರೆಡ್ಡಿ ಕ್ಯಾಮೆರಾ ಚಾಲನೆ ಮಾಡಿದರು. ಪ್ರಜ್ವಲ್ ದೇವರಾಜ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಪಿ.ಸಿ.ಶೇಖರ್ ನನಗೆ ಹೇಳಿದ ಕಥೆ ನನಗೆ ಇಷ್ಟವಾಯಿತು. ಕಥೆ ಕೇಳಿದ ಕೆಲವೇ ದಿನಗಳಲ್ಲಿ ಚಿತ್ರದ ಮುಹೂರ್ತ ನಡೆದಿದೆ. ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯಾಗಿ ಆಶಿಕಾ ರಂಗನಾಥ್ ಅಭಿನಯಿಸಿತ್ತಿದ್ದಾರೆ. ಮತ್ತೊಬ್ಬ ನಾಯಕಿ ಇರುತ್ತಾರೆ. ಯಾರೆಂಬುದು ಇಷ್ಟರಲ್ಲೇ ತಿಳಿಯಲಿದೆ. ಸಾಧುಕೋಕಿಲ, ತಾರಾ, ಅವಿನಾಶ್, ರಂಗಾಯಣ ರಘು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ ಎಂದರು ನಿರ್ಮಾಪಕ ಚಂದ್ರು ಕಡ್ಡಿಪುಡಿ. ಮೊದಲು ನಿರ್ಮಾಪಕ ಚಂದ್ರು ಅವರಿಗೆ ಕಥೆ ಹೇಳಿದೆ. ಇಷ್ಟಪಟ್ಟರು. ರೋಮಿಯೋ ಚಿತ್ರದ ನಂತರ ಲವ್ ಸಬ್ಜೆಕ್ಟ್ ಕಥೆ ಸಿದ್ದ ಮಾಡಿಕೊಂಡಿದ್ದೇನೆ. ಈ ಕಥೆಗೆ ಡಾರ್ಲಿಂಗ್ ಕೃಷ್ಣ ಅವರೆ ಸೂಕ್ತ ನಾಯಕ ಅನಿಸಿತು. ಆಶಿಕಾRead More →

masthmagaa.com: ನಾಡಿನಾದ್ಯಂತ ಗೌರಿ – ಗಣೇಶ ಹಬ್ಬದ ಸಡಗರ. ಗೌರಿ ಹಬ್ಬದ ಶುಭದಿನದಂದು “ಲವ್ ಮಿ or ಹೇಟ್ ಮಿ” ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ನೆರವೇರಿದೆ. ಚಿತ್ರದ ಮೊದಲ ಸನ್ನಿವೇಶಕ್ಕೆ ಮಿಲನ ನಾಗರಾಜ್ ಆರಂಭ ಫಲಕ ತೋರಿದರು.‌ ದಿನಕರ್ ತೂಗುದೀಪ ಕ್ಯಾಮೆರಾ ಚಾಲನೆ ಮಾಡಿದರು.ದೀಪಕ್ ಗಂಗಾಧರ್ ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ತೂಗುದೀಪ ಸಂಸ್ಥೆಯ ಕೆಲವು ಚಿತ್ರಗಳಿಗೆ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಾರ್ಯ ನಿರ್ವಹಿಸಿದ್ದ, ದೀಪಕ್ ಗಂಗಾಧರ್ ಆ ನಂತರ ವಿತರಕರಾಗೂ ಹೆಸರು ಮಾಡಿರುವವರು. ಈ ಚಿತ್ರದ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ಗೌರಿ ಹಬ್ಬದ ಶುಭದಿನದಂದು ಚಿತ್ರ ಆರಂಭಿಸಿದ್ದೇವೆ. ಇದೇ ಹದಿಮೂರರಿಂದ ಮೊದಲ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಗಲಿದೆ.‌ ಇದೊಂದು ಪಕ್ಕಾ ಲವ್ ಸ್ಟೋರಿ. ನಿಮ್ಮೆಲ್ಲರ ಬೆಂಬಲ ನಮಗಿರಲಿ ಎನ್ನುತ್ತಾರೆ ದೀಪಕ್ ಗಂಗಾಧರ್.ಒಳ್ಳೆಯ ಕಥೆ.‌ ಈ ಚಿತ್ರದಲ್ಲಿ ನನ್ನದು ಎರಡು ರೀತಿಯ ಪಾತ್ರ. ಕಾಲೇಜ್ ಹುಡುಗನಾಗಿ ಹಾಗೂ ಕಾಲೇಜ್ ನಂತರದ ದಿನಗಳದ್ದು. ಲವ್ ಸಬ್ಜೆಕ್ಟ್ ನನಗೆ ಇಷ್ಟ ಹಾಗಾಗಿ ಹೆಚ್ಚಾಗಿ ಅದನೇ ಆಯ್ಕೆ ಮಾಡಿಕೊಳ್ಳುತ್ತೇನೆ.Read More →

masthmagaa.com: ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ, ದೀಪಕ್ ಅರಸ್ ನಿರ್ದೇಶನದ “ಶುಗರ್ ಫ್ಯಾಕ್ಟರಿ” ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಸೆಪ್ಟೆಂಬರ್ 10 ಗಣೇಶ ಚತುರ್ಥಿ ಯ ಸಂಭ್ರಮ. ಆ ಶುಭದಿನದಂದು “ಶುಗರ್ ಫ್ಯಾಕ್ಟರಿ” ಚಿತ್ರದ ಲಿರಿಕಲ್ ಹಾಡು ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಸಾಂಗ್ ಟೀಸರ್‌ ಬರಲಿದೆ. ಬಹದ್ದೂರ್ ಚೇತನ್ ಅವರು ಬರೆದಿರುವ ಈ ಹಾಡಿಗೆ ಖ್ಯಾತ ಗಾಯಕ ಬಾಬಾ ಸೆಹಗಲ್ ಧ್ವನಿಯಾಗಿದ್ದಾರೆ. ಕಫಿರ್ ರಫಿ ಸಂಗೀತ ನೀಡಿದ್ದಾರೆ. ಡಾರ್ಲಿಂಗ್ ಕೃಷ್ಣ ಅವರೊಡನೆ ಈ‌ ಹಾಡಿಗೆ ಸೋನಾಲ್ ಮಾಂಟೆರೊ ಹೆಜ್ಜೆ ಹಾಕಿದ್ದಾರೆ. ಧನಂಜಯ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಪ್ರವಾಸಿಗರ ಸ್ವರ್ಗ ಗೋವಾದಲ್ಲಿ ಈ ಹಾಡನ್ನು ಸುಂದರವಾಗಿ ಸೆರೆಹಿಡಿದಿದ್ದಾರೆ ಛಾಯಾಗ್ರಹಕ ಸಂತೋಷ್ ರೈ ಪಾತಾಜೆ. ಅದ್ದೂರಿಯಾಗಿ ಮೂಡಿಬಂದಿರುವ ಈ ಹಾಡಿಗೆ ಪ್ರೇಕ್ಷಕರ ಮನಸ್ಸಿಗೆ ಲಗ್ಗೆ ಹಾಕುವುದು ಖಚಿತ ಎನ್ನುತ್ತಾರೆ ನಿರ್ದೇಶಕರು. ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗಿರೀಶ್ ಆರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.‌ ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಾಲ್ ಮಾಂಟೆರೊ, ಅದ್ವಿತಿ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಅಭಿನಯಿಸುತ್ತಿದ್ದಾರೆ. -masthmagaa.com ShareRead More →

masthmagaa.com: ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಸ್ಕ್ರಿಪ್ಟ್ ಪೂಜೆ ಧರ್ಮಸ್ಥಳದ ಶ್ರೀಮಂಜುನಾಥನ ಸನ್ನಿಧಿಯಲ್ಲಿ ನಡೆದಿದೆ. “ಮಳೆ” ಚಿತ್ರದ ಖ್ಯಾತಿಯ ಶಿವತೇಜಸ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ರಶ್ಮಿ ಫಿಲಂಸ್ ಮೂಲಕ ಸುಮಂತ್ ಕ್ರಾಂತಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.” ಕಾಲಚಕ್ರ” ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿರುವ ಸುಮಂತ್ ಕ್ರಾಂತಿ ಅವರು ಪ್ರಜ್ವಲ್ ದೇವರಾಜ್ ನಟನೆಯ ಚಿತ್ರವೊಂದನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದು ಅವರ ನಿರ್ಮಾಣದ ಮೂರನೇ ಚಿತ್ರ. ಬರ್ಕ್ಲಿ ಚಿತ್ರವನ್ನು ಸುಮಂತ್ ಕ್ರಾಂತಿ ನಿರ್ದೇಶಿಸಿದ್ದಾರೆ.ಅರ್ಜುನ್ ಜನ್ಯರ ಸಂಗೀತ ಈ ನೂತನ ಚಿತ್ರಕ್ಕಿರಲಿದೆ. ಸದ್ಯದಲ್ಲೇ ಚಿತ್ರದ ಬಗ್ಗೆ ಹಚ್ಚಿನ ಮಾಹಿತಿ ನೀಡುವುದಾಗಿ ಸುಮಂತ್ ಕ್ರಾಂತಿ ತಿಳಿಸಿದ್ದಾರೆ. -masthmagaa.com Share on: WhatsAppContact Us for AdvertisementRead More →

masthmagaa.com: ಸದಭಿರುಚಿಯ ಸಿನಿಮಾಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿರುವ ಹೆಮ್ಮೆಯ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಎಂ.ಎಲ್. ಸಿ (ರಾಷ್ಟಪ್ರಶಸ್ತಿ ವಿಜೇತ) ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ srikrishna@gmail.com ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಕಳೆದ ಎಂಟು ದಿನಗಳಿಂದ ಮೇಲು ಕೋಟೆ, ಮೈಸೂರು ಸುತ್ತಮುತ್ತ ಹಾಡಿನ ಚಿತ್ರೀಕರಣ ‌ನಡೆದಿದ್ದು, ಇಂದು ಮೈಸೂರಿನ ಸಂದೇಶ್ ಹೋಟೆಲ್‌ ನಲ್ಲಿ ಚಿತ್ರೀಕರಣ ಪೂರ್ಣಗೊಳಿಸಿ ಕುಂಬಳಕಾಯಿ ಒಡೆಯಲಾಯಿತು. ಒಟ್ಟು ತೊಂಬತ್ತು ದಿನಗಳ ಚಿತ್ರೀಕರಣ ನಡೆದಿದೆ ನಾಗಶೇಖರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ನಾಯಕಾರಾಗಿ ಡಾರ್ಲಿಂಗ್ ಕೃಷ್ಣ ಅಭಿನಯಿಸಿದ್ದಾರೆ. ಭಾವನಾ ಈ ಚಿತ್ರದ ನಾಯಕಿ. ಚಂದನ್ ಗೌಡ ದ್ವಿತೀಯ ನಾಯಕರಾಗಿ ನಟಿಸಿರುವ ಈ ಚಿತ್ರದ ಅತಿಥಿ ಪಾತ್ರದಲ್ಲಿ ನಿರ್ದೇಶಕ, ನಾಯಕ ರಿಷಬ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ದತ್ತಣ್ಣ, ಸಾಧುಕೋಕಿಲ, ಚಿಕ್ಕಣ್ಣ, ಸಾತ್ವಿಕ್(ಕಾರ್ಪೊರೇಟರ್), ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮುಂತಾದ ಅದ್ದೂರಿ ತಾರಾಬಳಗ ಈ ಚಿತ್ರದಲ್ಲಿದೆ. ಈ ಹಿಂದೆ ಸಂದೇಶ್ ಪ್ರೊಡಕ್ಷನ್ಸ್ ಮೂಲಕ ಬಿಡುಗಡೆಯಾಗಿ ಯಶಸ್ವಿಯಾಗಿದ್ದ “ಅಮರ್” ಚಿತ್ರವನ್ನೂ ನಾಗಶೇಖರ್ ಅವರೆ ನಿರ್ದೇಶಿಸಿದ್ದರು. ಐದುRead More →

masthmagaa.com: ಇದೇ ಜೂನ್ 12 ನೇ ತಾರೀಖಿಗೆ ನಟ ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬ. ಹಾಗಾಗಿ ಕೃಷ್ಣ ಅವರ ಹುಟ್ಟುಹಬ್ಬಕ್ಕೆ “ಶುಗರ್ ಫ್ಯಾಕ್ಟರಿ”  ಚಿತ್ರದ ವಿಡಿಯೋ ಟೀಸರ್ ಬಿಡುಗಡೆಯಾಗಲಿದೆ. ಟೀಸರ್ ನಲ್ಲಿ ಸಾಮಾನ್ಯವಾಗಿ ಪೋಸ್ಟರ್ ಗಳನ್ನು ಬಳಸಿಕೊಳ್ಳಲಾಗುತ್ತದೆ. ಆದರೆ ನಾವು ವಿಡಿಯೋ ತುಣುಕುಗಳನ್ನು ಬಳಸಿಕೊಂಡು ವಿಭಿನ್ನವಾಗಿ ಟೀಸರ್ ನಿರ್ಮಾಣ ಮಾಡಿದ್ದೇವೆ ಎನ್ನುತ್ತಾರೆ ಚಿತ್ರದ ನಿರ್ದೇಶಕ ದೀಪಕ್ ಅರಸ್. ಜೂನ್ 12ರಂದು ಆನಂದ್ ಆಡಿಯೋ ಯೂಟ್ಯೂಬ್‌ ಚಾನಲ್ ನಲ್ಲಿ ಟೀಸರ್ ಬಿಡುಗಡೆಯಾಗಲಿದೆ.  ಜೂನ್ 11 ರಂದು ಸಂಜೆ 5 ಗಂಟೆಗೆ ಇನ್ ಸ್ಟಾಗ್ರಾಂ ಮೂಲಕ ಲೈವ್ ನಲ್ಲಿ ಚಿತ್ರತಂಡದ ಸದಸ್ಯರು ಟೀಸರ್ ಹಾಗೂ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಮಾಹಿತಿ ನೀಡಲಿದ್ದಾರೆ. ಈಗಾಗಲೇ ಬಹುತೇಕ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಹಾಗೂ ಗೋವಾದಲ್ಲಿ ಚಿತ್ರೀಕರಣ ನಡೆದಿದೆ. ಲಾಕ್ ಡೌನ್ ಮುಗಿದ್ದು, ಚಿತ್ರೀಕರಣಕ್ಕೆ ಅನುಮತಿ ದೊರಕಿದ ಕೂಡಲೇ ಚಿತ್ರೀಕರಣ ಆರಂಭವಾಗಲಿದೆ.ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯರಾಗಿ  ಸೋನಾಲ್ ಮಾಂಟೆರೊ, ಅದ್ವಿತಿ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ಲವ್ ಮಾಕ್ಟೇಲ್ ಅಭಿ ಮುಂತಾದವರುRead More →