masthmagaa.com: ವಿಜಯ್ ಜಗದಾಲ್ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ ಹಾಗೂ ವಿವಿಧ್ ಸಿನಿಮಾಸ್ ಲಾಂಛನದಲ್ಲಿ ಮಂಜುನಾಥ್ ಎಂ, ಹರೀಶ್ ಬಿ.ಕೆ ಹಾಗೂ ವಿನೋದ್ ಎನ್ ನಿರ್ಮಿಸಿರುವ “ರೂಪಾಯಿ” ಚಿತ್ರದ ಟ್ರೇಲರ್ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಟ್ರೇಲರ್ ಗೆ ಎಲ್ಲಾ ಕಡೆ ಮೆಚ್ಚುಗೆ ಹರಿದು ಬರುತ್ತಿದೆ. ಆಟೋ ಕ್ಯಾಬ್ ಚಾಲಕರು, ವಿಧ್ಯಾರ್ಥಿಗಳು ಹಾಗೂ ಹೋಟೆಲ್ ಮಾಲಿಗಳು ವೀರೇಶ ಚಿತ್ರಮಂದಿರದಲ್ಲಿ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದು ವಿಶೇಷ.ಯಾವುದೇ ಚಿತ್ರ ಬಿಡುಗಡೆಯಾದರೂ ಮೊದಲ ಸಾಲಿನಲ್ಲಿ ನಿಂತು ಟಿಕೆಟ್ ಪಡೆದು ತಮ್ಮ ಅಭಿಮಾನವನ್ನು ಪ್ರದರ್ಶಿಸುವ ಆಟೋ, ಕ್ಯಾಬ್ ಚಾಲಕರು, ವಿದ್ಯಾರ್ಥಿಗಳು ಹಾಗೂ ಹೋಟೆಲ್ ಮಾಣಿಗಳಿಗೆ “ರೂಪಾಯಿ” ತಂಡ ವಿಶೇಷ ಧನ್ಯವಾದ ತಿಳಿಸಿದೆ.   ಕಾಮಿಡಿ, ಆಕ್ಷನ್, ಲವ್, ಸೆಂಟಿಮೆಂಟ್, ಥ್ರಿಲ್ಲಿಂಗ್ ಎಲ್ಲಾ ಕಮರ್ಷಿಯಲ್ ಹೀಗೆ ಎಲ್ಲಾ ಅಂಶಗಳನ್ನೊಳಗೊಂಡಿರುವ “ರೂಪಾಯಿ” ಚಿತ್ರ ಫೆಬ್ರವರಿ 10ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಿಜಯ್ ಜಗದಾಲ್, ಕೃಷಿ ತಾಪಂಡ, ಚಂದನ ರಾಘವೇಂದ್ರ, ಮೈತ್ರಿ ಜಗದೀಶ್, ರಾಮ್ ಚಂದನ್, ಪ್ರಮೋದ್ ಶೆಟ್ಟಿ, ಅನಿಲ್ ಕುಮಾರ್ ಮುಂತಾದವರು ತಾರಾಬಳಗದಲ್ಲಿದ್ದಾರೆ. -masthmagaa.comRead More →

masthmagaa.com: ಸ್ಯಾಂಡಲ್‌ವುಡ್‌ನಲ್ಲಿ ಈಗಾಗಲೇ ಸಾಕಷ್ಟು ಮಾಟ-ಮಂತ್ರ ಕುರಿತಾದ ಸಿನಿಮಾಗಳು ಬಂದು ಹೋಗಿವೆ. ಇದೀಗ ಆ ಸಾಲಿಗೆ ಸೇರಲು ಸಿದ್ದವಾಗಿದೆ ‘ಸಕೂಚಿ’. ಹೌದು ಸಾವಿನ ಸೂಚಿ ಎಂಬ ಅಡಿಬರಹ ಹೊಂದಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಜೆಂಕಾರ್ ಮ್ಯೂಸಿಕ್‌ನಲ್ಲಿ ರಿಲೀಸ್ ಆದ ಟ್ರೇಲರ್‌ಗೆ ಜಾಲತಾಣದಲ್ಲಿ ಒಳ್ಳೆ ರೆಸ್ಪಾನ್ಸ್ ಕೂಡ ಸಿಗುತ್ತಿದೆ. ಇದೇ ಫೆಬ್ರವರಿ 17ರಂದು ಸಿನಿಮಾ ಬಿಡುಗಡೆಯಾಗಲಿದೆ. ಹಾಗಾಗಿ ಚಿತ್ರತಂಡ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಪತ್ರಿಕಾಗೋಷ್ಠಿ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಅಶೋಕ ಚಕ್ರವರ್ತಿ ‘ಇದು ನಾನು ನಿರ್ದೇಶನ ಮಾಡಿರುವ ಮೊದಲ ಸಿನಿಮಾ. ಚಿತ್ರದಲ್ಲೊಂದು ವಿಭಿನ್ನವಾದ ಪಾತ್ರವಿದೆ. ಹಾಗಾಗಿ ನಾನು ಈ ಗೆಟಪ್‌ನಲ್ಲಿ ಇಲ್ಲಿಗೆ ಬಂದಿದ್ದೇನೆ ಎಂದು ಮಂತ್ರವಾದಿ ಗೆಟಪ್‌ನಲ್ಲಿ ಬಂದ ಕಾರಣ ತಿಳಿಸಿದರು. ನಂತರ ಮಾತನಾಡಿದ ಅವರು ‘ನಾನು ಈ ‘ಸಕೂಚಿ’ ಎಂಬ ಶಬ್ದವನ್ನು ಒಂದಿಷ್ಟು ಕಡೆ ಕೇಳಿದ್ದೆ. ಆ ನಂತರ ‘ಸಕೂಚಿ’ಗೆ ಅರ್ಥ ಅತಿ ಗೋರವಾದ ವಾಮಾಚಾರ ಎಂದು ಗೊತ್ತಾಯ್ತು. ಈ ಬ್ಲಾಕ್ ಮ್ಯಾಜಿಕ್ ಕತೆಯನ್ನು ತೆಗೆದುಕೊಂಡುRead More →

masthmagaa.com: ರಾಮೇನಹಳ್ಳಿ ಜಗನ್ನಾಥ್ ಚೊಚ್ಚಲ ನಿರ್ದೇಶನದಲ್ಲಿ ಫೆಬ್ರವರಿ 10ರಂದು ಬಿಡುಗಡೆಯಾಗುತ್ತಿರುವ ‘ಹೊಂದಿಸಿ ಬರೆಯಿರಿ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜ್ ಕುಮಾರ್ ಬಹು ನಿರೀಕ್ಷಿತ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಪ್ರವೀಣ್ ತೇಜ್, ಭಾವನಾ ರಾವ್, ಸಂಯುಕ್ತ ಹೊರನಾಡು, ಐಶಾನಿ ಶೆಟ್ಟಿ, ನವೀನ್ ಶಂಕರ್, ಶ್ರೀ ಮಹದೇವ್, ಅರ್ಚನಾ ಜೋಯಿಸ್, ಅನಿರುದ್ಧ್ ಆಚಾರ್ಯ ಒಳಗೊಂಡ ಕಲಾವಿದರ ಮುಖ್ಯ ಭೂಮಿಕೆ ಈ ಚಿತ್ರದಲ್ಲಿದೆ. ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಮಾತನಾಡಿ ‘ಹೊಂದಿಸಿ ಬರೆಯಿರಿ’ ಎಂದಾಗ ನೆನಪಾಗೋದು ಬಾಲ್ಯ. ಪರಿಸ್ಥಿತಿಗಳೊಂದಿಗೆ ಹೊಂದಿಕೊಂಡು ಹೋಗಬೇಕು, ಬದುಕು ಬಂದಂತೆ ಸ್ವೀಕರಿಸಿ ಅನ್ನೋದು ಈ ಚಿತ್ರದ ಆಶಯ. ಐದು ಜನ ಸ್ನೇಹಿತರ ಹನ್ನೆರಡು ವರ್ಷದ ಜರ್ನಿ ಈ ಚಿತ್ರದಲ್ಲಿದೆ. ಕಾಲೇಜು, ಕಾಲೇಜು ನಂತರದ ದಿನಗಳು, ಮದುವೆ ಈ ಜರ್ನಿಯನ್ನು ಒಳಗೊಂಡಿದೆ. ತುಂಬಾ ಜನಕ್ಕೆ ಈ ಸಿನಿಮಾ ಕನೆಕ್ಟ್ ಆಗುತ್ತೆ. ಈ ಚಿತ್ರದ ಟೈಟಲ್ ನೀಡಿದ್ದು ಮಾಸ್ತಿ ಸರ್. ನನಗೆ ಈ ಚಿತ್ರ ಹೊಸತು. ಇಲ್ಲಿ ನಟಸಿರೋರೆಲ್ಲ ಅನುಭವಿಗಳು ಆದ್ರಿಂದ ಸಾಕಷ್ಟು ತಯಾರಿRead More →

masthmagaa.com: ಕೋಟ್ಯಾಂತರ ಜನರಿಗೆ ಆಶ್ರಯ ನೀಡಿರುವ ಬೆಂಗಳೂರಿನ ಕುರಿತಾದ ಚಿತ್ರ ‘ಮೇಡ್ ಇನ್ ಬೆಂಗಳೂರು’ ಇದೇ ಡಿಸೆಂಬರ್ 30 ರಂದು ಬಿಡುಗಡೆಯಾಗಿದೆ. ಬಿಡುಗಡೆಗೂ ಪೂರ್ವದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಯುವ ಉದ್ಯಮಿ ಸುಹಾಸ್ ಗೋಪಿನಾಥ್ ಸೇರಿದಂತೆ ಅನ್ನು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಭಾಗಿಯಾಗಿದ್ದರು‌. ನಾವು ಮೂರು ಜನ ಸ್ನೇಹಿತರು ಸೇರಿ ಇಪ್ಪತ್ತೈದು ವರ್ಷಗಳ ಹಿಂದೆ ಒಂದು ಕಂಪನಿ ಆರಂಭಿಸಿದ್ದೆವು. ನಿರ್ದೇಶಕ ಪ್ರದೀಪ್ ಶಾಸ್ತ್ರಿ ಸ್ಟಾರ್ಟ್ ಅಪ್ ಹಾಗೂ ಬೆಂಗಳೂರಿನ ಮೇಲಿರುವ ಎಮೋಷನ್ ಕುರಿತಾದ ಈ ಚಿತ್ರದ ಕಥೆ ಹೇಳಿದರು. ನನಗೆ ನಾವು ಕಂಪನಿ ಆರಂಭಿಸಿದ ದಿನಗಳು ನೆನಪಾದವು. ಕಥೆ ಇಷ್ಟವಾಗಿ ಸಿನಿಮಾ ಆರಂಭ ಮಾಡಿದ್ದೆವು. ಅನಂತನಾಗ್, ಸಾಯಿಕುಮಾರ್, ಪ್ರಕಾಶ್ ಬೆಳವಾಡಿ ಅವರಂತಹ ಹಿರಿಯ ಕಲಾವಿದರು ಹಾಗೂ ಹೊಸ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ‌. ಚಿತ್ರ ಡಿಸೆಂಬರ್ 30ರಂದು ತೆರೆಗೆ ಬರುತ್ತಿದೆ. ನೋಡಿ ಹಾರೈಸಿ ಎಂದರು ನಿರ್ಮಾಪಕರು ಬಾಲಕೃಷ್ಣ ಬಿ.ಎಸ್. ಈ ಚಿತ್ರದ ನಿರ್ಮಾಪಕರಿಗೆ ಕಥೆ ಹೇಳಲು ಮೇಲಿಂದ ಮೇಲೆ ಫೋನ್ ಮಾಡುತ್ತಿದ್ದೆ. ಕೊನೆಗೂ ಕಥೆ ಕೇಳಿದ್ದ ಬಾಲಕೃಷ್ಣ ಅವರುRead More →

masthmagaa.com: ಟೀಸರ್, ಹಾಡುಗಳ ಮೂಲಕ ಪ್ರೇಕ್ಷಕರ ಮನದಲ್ಲಿಭರವಸೆಯ ಮುದ್ರೆ ಒತ್ತಿರುವ ‘ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರದ ಟ್ರೇಲರ್ ರನ್ನು ಡಿಜಿಟಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ವೇದಿಕೆಯಲ್ಲಿ ನಾಯಕ ನಟ ವಸಿಷ್ಠ ಸಿಂಹ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಡಿಸೆಂಬರ್ 2ರಂದು ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಟ್ರೇಲರ್ ಹೊತ್ತು ಬಂದ ಸಿನಿಮಾ ತಂಡ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಸಿನಿಮಾದ ಕ್ಯೂರಿಯಾಸಿಟಿ ಹೊತ್ತ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಪ್ರಾಮಿಸಿಂಗ್ ಆಗಿದ್ದು ಭರವಸೆ ಮೂಡಿಸಿದೆ. ಗುಲ್ಟು ಖ್ಯಾತಿಯ ನಟ ನವೀನ್ ಶಂಕರ್, ಐಶಾನಿ ಶೆಟ್ಟಿ ನಟಿಸಿರುವ ಈ ಚಿತ್ರವನ್ನು ಶ್ರೀಧರ್ ಶಿಕಾರಿಪುರ ನಿರ್ದೇಶನ ಮಾಡಿದ್ದಾರೆ. ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ನಟ ವಸಿಷ್ಠ ಸಿಂಹ ಚಿತ್ರದಲ್ಲಿ ಪ್ರತಿಯೊಂದು ಅಂಶಗಳು ಕೂಡ ಗಮನ ಸೆಳೆಯುತ್ತಿದೆ. ಯಂಗ್ ಟೀಂ ಸೇರಿಕೊಂಡು ಇಷ್ಟು ಒಳ್ಳೆಯ ಸಿನಿಮಾವನ್ನು ಕಟ್ಟಿಕೊಟ್ಟಿದೆ ಅಂದ್ರೆ ತುಂಬಾ ಖುಷಿಯ ವಿಚಾರ. ಟ್ರೇಲರ್ ಬಹಳಾನೇ ಖುಷಿ ಕೊಡ್ತು. ಮ್ಯೂಸಿಕ್, ಡೈಲಾಗ್, ಕ್ಯಾಮೆರಾ ವರ್ಕ್ ತುಂಬಾನೇ ಚೆನ್ನಾಗಿRead More →

masthmagaa.com: ಎಂ. ಎಂ. ಸಿನಿಮಾಸ್ ಬ್ಯಾನರ್ ನಡಿ ಭಾಸ್ಕರ್ ಆರ್ ನೀನಾಸಂ ನಿರ್ದೇಶಿಸಿರುವ ಸದ್ದು ವಿಚಾರಣೆ ನಡೆಯುತ್ತಿದೆ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಇಂಟ್ರಸ್ಟಿಂಗ್ ಟ್ರೇಲರ್, ಚೆಂದದ ಹಾಡುಗಳ ಮೂಲಕ ಚಿತ್ರ ಪ್ರೇಮಿಗಳ ಮನಗೆದ್ದಿರುವ ಚಿತ್ರ ನವೆಂಬರ್ 25ಕ್ಕೆ ಪ್ರೇಕ್ಷಕರೆದುರು ಬರಲು ರೆಡಿಯಾಗಿದೆ. ರಂಗಭೂಮಿ ಪ್ರತಿಭೆ ಭಾಸ್ಕರ್ ಆರ್ ನೀನಾಸಂ ನಿರ್ದೇಶನದ ಮೊದಲ ಸಿನಿಮಾವಿದು. ಚಿತ್ರಕ್ಕೆ ಅಶ್ವಿನಿ ಕೆ ಎನ್ ಕಥೆ ಬರೆದಿದ್ದು, ಭಾಸ್ಕರ್ ಆರ್ ನೀನಾಸಂ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ನೈಜ ಘಟನೆಗಳಿಂದ ಸ್ಪೂರ್ತಿ ಪಡೆದು ಹೆಣೆದ ಈ ಚಿತ್ರ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಒಳಗೊಂಡಿದೆ. ಪಾವನ ಗೌಡ, ರಾಕೇಶ್ ಮಯ್ಯ, ಮಧುನಂದನ್ ಚಿತ್ರದ ಮುಖ್ಯಭೂಮಿಕೆಯಲ್ಲಿ ನಟಿಸಿದ್ದು, ಅಚ್ಯುತ್ ಕುಮಾರ್, ಕೃಷ್ಣ ಹೆಬ್ಬಾಳೆ, ರಾಘು ಶಿವಮೊಗ್ಗ, ಜಾಹಂಗೀರ್, ರೋಹಿಣಿ ರಘುನಂನಂದನ್ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ. ಬೆಂಗಳೂರು, ಸಕಲೇಶಪುರ, ಮಂಗಳೂರು, ಮೈಸೂರಿನಲ್ಲಿ ಸಿನಿಮಾವನ್ನು ಸೆರೆ ಹಿಡಿಯಲಾಗಿದ್ದು, ಎಂ. ಎಂ. ಸಿನಿಮಾಸ್ ಬ್ಯಾನರ್ ನಡಿ ಸುರಭಿ ಲಕ್ಷ್ಮಣ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಾಜ್ ಕಾಂತ ಕ್ಯಾಮೆರಾ ನಿರ್ದೇಶನ, ಸಚಿನ್ ಬಸ್ರೂರುRead More →

masthmagaa.com: ಖ್ಯಾತ ಉದ್ಯಮಿ ವಿಜಯ ಸಂಕೇಶ್ವರ ಅವರ ಜೀವನಾಧಾರಿತ ಚಿತ್ರ “ವಿಜಯಾನಂದ”. ಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಸಂಗೀತ ನೀಡಿರುವ ಈ ಚಿತ್ರದ “ಹಾಗೆ ಆದ ಆಲಿಂಗನ” ಎಂಬ ಹಾಡು ಬಿಡುಗಡೆಯಾಗಿದೆ. ಧನಂಜಯ್ ರಂಜನ್ ಬರೆದಿರುವ ಈ ಹಾಡನ್ನು ವಿಜಯ್ ಪ್ರಕಾಶ್ ಹಾಗೂ ಕೀರ್ತನಾ ವೈದ್ಯನಾಥನ್ ಇಂಪಾಗಿ ಹಾಡಿದ್ದಾರೆ. ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ಈ ಹಾಡು ಬಿಡುಗಡೆಯಾಯಿತು. ಮಲೆಯಾಳಂನ ಖ್ಯಾತ ಸಂಗೀತ ನಿರ್ದೇಶಕರಾದ ಗೋಪಿ ಸುಂದರ್, “ಗೀತಾ ಗೋವಿಂದಂ” ಸೇರಿದಂತೆ ಮುನ್ನೂರಕ್ಕೂ ಅಧಿಕ ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. ಕನ್ನಡದಲ್ಲಿ ಇದು ಮೊದಲ ಚಿತ್ರ. ಇಮ್ರಾನ್ ಸರ್ದಾರಿಯಾ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಹಾಡು ಬಿಡುಗಡೆ ಸಮಾರಂಭದಲ್ಲಿ ವಿಜಯ ಸಂಕೇಶ್ವರ ಚಿತ್ರದ ಕುರಿತು ಮಾತನಾಡಿದರು. ನನ್ನ‌ ಜೀವನಾಧಾರಿತ ಸಿನಿಮಾ ಮಾಡುವುದಾಗಿ ನಿರ್ದೇಶಕಿ ರಿಶಿಕಾ ಶರ್ಮ ಕೇಳಿದಾಗ, ಈ ಚಿಕ್ಕ ಹುಡುಗಿ ಏನು ಮಾಡುತ್ತಾಳೆ? ಅನಿಸಿತು. ಆದರೆ ಈಗ, ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ರಿಶಿಕಾ ಬಹಳ ಚೆನ್ನಾಗಿ ಸಿನಿಮಾ ಮಾಡಿದ್ದಾರೆ. ನನ್ನ ಮಗ ಆನಂದ್ ಈRead More →

masthmagaa.com: ‘ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಖ್ಯಾತಿಯ ನಿರ್ಮಾಪಕ ಹೆಚ್. ಕೆ ಪ್ರಕಾಶ್ ಈ ಬಾರಿಯ ದೀಪಾವಳಿಗೆ ನಟ ಅಜಯ್ ರಾವ್ ಜೊತೆ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಬಾರಿಯೂ ಹೊಸ ಪ್ರತಿಭೆಗೆ ಅವಕಾಶ ನೀಡಿರುವ ನಿರ್ಮಾಪಕರು ಇಂಟ್ರಸ್ಟಿಂಗ್ ಟೈಟಲ್ ಕೂಡ ಅನೌನ್ಸ್ ಮಾಡಿದ್ದಾರೆ. ಅದುವೇ ‘ಬ್ಯಾಂಕ್ ಆಫ್ ಭಾಗ್ಯಲಕ್ಷಿ’. ಇದು ಹೆಚ್. ಕೆ ಪ್ರಕಾಶ್ ಅವರ ಶ್ರೀದೇವಿ ಎಂಟರ್ಟೈನರ್ಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ ಐದನೇ ಸಿನಿಮಾವಾಗಿದೆ. ‘ಬ್ಯಾಂಕ್ ಆಫ್ ಭಾಗ್ಯಲಕ್ಷಿ’ ಕಥೆ ಕೇಳಿ ಥ್ರಿಲ್ ಆಗಿರೋ ನಟ ಅಜಯ್ ರಾವ್ ಈ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಪ್ರತಿ ಬಾರಿ ನವ ನಿರ್ದೇಶಕರಿಗೆ ಮೊದಲ ಆದ್ಯತೆ ನೀಡುವ ನಿರ್ಮಾಪಕರಾದ ಹೆಚ್ ಕೆ ಪ್ರಕಾಶ್ ಈ ಬಾರಿಯೂ ನವ ಹಾಗೂ ಪ್ರತಿಭಾವಂತ ನಿರ್ದೇಶಕನೊಂದಿಗೆ ಕೈ ಜೋಡಿಸಿದ್ದಾರೆ. ಅಭಿಷೇಕ್ ಎಂ ಈ ಚಿತ್ರದ ಮೂಲಕ ನಿರ್ದೇಶಕನಾಗಿ ಸ್ಯಾಂಡಲ್ ವುಡ್ ಅಂಗಳಕ್ಕೆ ಪರಿಚಿತರಾಗುತ್ತಿದ್ದಾರೆ. ನಿರ್ದೇಶಕ ಸಿಂಪಲ್ ಸುನಿ ಜೊತೆ ‘ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ’, ‘ಬಹುಪರಾಕ್’ ಮತ್ತುRead More →

masthmagaa.com: ಸಿನಿಮಾರಂಗ ಬಹಳ ಬೇಗ ಎಲ್ಲರನ್ನು ಆಕರ್ಷಿಸುತ್ತೆ. ಕೆಲವರಿಗೆ ನಟರಾಗುವ ಆಸೆ, ಇನ್ನೂ ಕೆಲವರಿಗೆ ನಿರ್ದೇಶಕರಾಗುವ, ಕಲಾವಿದರಾಗುವ ಆಸೆ. ಒಟ್ಟಿನಲ್ಲಿ ಬಣ್ಣದ ಲೋಕದಲ್ಲಿ ಏನಾದರೂ ಸಾಧಿಸುವ ಕನಸು. ಆ ಕನಸುಗಳುಳ್ಳ ಸಿನಿಮಾ ಪ್ರೀತಿಯುಳ್ಳ ಒಂದಿಷ್ಟು ಸಮಾನ ಮನಸ್ಕರು ಸೇರಿ ಮಾಡಿರುವ ನವಿರಾದ ಪ್ರೇಮಕಥೆಯುಳ್ಳ ಚಿತ್ರ ‘ಕಂಬ್ಳಿಹುಳ’. ಟೈಟಲ್ ಮೂಲಕವೇ ಚಂದನವನ ಹಾಗೂ ಸಿನಿರಸಿಕರ ಮನಸ್ಸಲ್ಲಿ ಒಂದಿಷ್ಟು ಕುತೂಹಲ ಮೂಡಿಸಿದೆ. ಚೆಂದದ ಹಾಡಿನ ಮೂಲಕ ಎಲ್ಲರ ಗಮನ ತನ್ನತ್ತ ಸೆಳೆದ ಚಿತ್ರತಂಡವೀಗ ಟ್ರೇಲರ್ ಬಿಡುಗಡೆ ಮಾಡಿದೆ. ಟ್ರೈಲರ್ ಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಚಿತ್ರ ನವೆಂಬರ್ 4 ನೇ ತಾರೀಖು ಬಿಡುಗಡೆ ಆಗಲಿದೆ. ಕಿರುಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ನಿರ್ದೇಶಕ ನವನ್ ಶ್ರೀನಿವಾಸ್ ಅವರ ನಿರ್ದೇಶನದ ಮೊದಲ ಸಿನಿಮಾ ಇದು. ಮಲೆನಾಡು ಭಾಗದಲ್ಲಿ ನಡೆಯುವ ಕಥೆ ಚಿತ್ರದಲ್ಲಿದೆ. ಶೃಂಗೇರಿ, ಸಕಲೇಶಪುರ, ತೀರ್ಥಹಳ್ಳಿ, ಸುತ್ತಮುತ್ತ ‘ಕಂಬ್ಳಿಹುಳ’ ಚಿತ್ರೀಕರಣ ನಡೆಸಲಾಗಿದೆ. ಎಮೋಷನಲ್ ಜರ್ನಿ ಸಿನಿಮಾ ಇದಾಗಿದ್ದು ರಂಗಭೂಮಿ ಕಲಾವಿದ ಅಂಜನ್ ನಾಗೇಂದ್ರ ಹಾಗೂ ಅಶ್ವಿತಾ ಆರ್ ಹೆಗ್ಡೆ ಚಿತ್ರದ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ಗ್ರೇRead More →

masthmagaa.com: ಉತ್ತರ ಕರ್ನಾಟಕದ ಯುವ ಪ್ರತಿಭೆ ಸಚಿನ್ ಧನಪಾಲ್ ನಾಯಕನಾಗಿ ಅಭಿನಯಸಿದ ಚಾಂಪಿಯನ್ ಚಿತ್ರಕ್ಕೆ ರಾಜ್ಯದೆಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಅಪಾರ ಮೆಚ್ಚುಗೆ ಗಳಿಸಿದೆ. ಚಿತ್ರ ವೀಕ್ಷಿಸಿದ ಬಹುತೇಕರು ಆ್ಯಕ್ಷನ್ ಬ್ಲಾಕ್ ಹಾಗೂ ಹಾಡುಗಳ ಬಗ್ಗೆಯೇ ಹೆಚ್ಚು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಗೆಲುವಿನ ಸಂತಸವನ್ನು ನಿರ್ಮಾಪಕ ಶಿವಾನಂದ್ ಎಸ್.ನೀಲಣ್ಣನವರ್ ಹಾಗೂ ನಾಯಕ ಸಚಿನ್ ಧನಪಾಲ್ ಮಾದ್ಯಮ ಮಿತ್ರರೊಂದಿಗೆ ಹಂಚಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿನ್ ಪ್ರತಿಯೊಬ್ಬರೂ ಚಿತ್ರದ ಮೇಕಿಂಗ್ ಕುರಿತು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ, ನಮ್ಮ ನಿರೀಕ್ಷೆಯಂತೆಯೇ ಚಿತ್ರ ಜನರನ್ನು ತಲುಪಿದೆ. ಆಕ್ಷನ್ ಸೀಕ್ವೇನ್ಸ್ ಬಗ್ಗೆ ಸಾಕಷ್ಟು ಜನ ಮಾತಾಡುತ್ತಿದ್ದಾರೆ. ಗುಡ್ ಮೇಕಿಂಗ್ ಚಿತ್ರ, ಹೊಸಬರ ಸಿನಿಮಾ ಅಂತ ಎಲ್ಲೂ ಅನಿಸಲ್ಲ ಎನ್ನುವ ಪ್ರತಿಕ್ರಿಯೆ ಬರುತ್ತಿದೆ. ಉತ್ತರ ಕರ್ನಾಟಕದಾದ್ಯಂತ ಚಿತ್ರ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಬೆಳಗಾವಿ,ಹುಬ್ಬಳ್ಳಿ, ಬೀದರ್, ಗುಲ್ಬರ್ಗ, ರಾಯಚೂರಿನಲ್ಲಿ ಎಲ್ಲಾ ಶೋ ಭರ್ತಿಯಾಗಿದೆ. ಜನರ ಈ ಪ್ರತಿಕ್ರಿಯೆ ಕಂಡು ನಾವು ಈವರೆಗೆ ಪಟ್ಟಂಥ ಶ್ರಮ ಸಾರ್ಥಕ ಎನಿಸಿದೆ, ಇದಕ್ಕೆಲ್ಲ ನಿರ್ಮಾಪಕರ ಸಹಕಾರ, ಬೆಂಬಲವೇ ಕಾರಣ ಎಂದರು. ಸೀನ್ ಹಾಗೂRead More →