ದೇಶದಲ್ಲಿಂದು 3,993 ಜನರಿಗೆ ಕೊರೋನಾ… 108 ಜನ ಸಾವು!
masthmagaa.com: ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 3,993 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 108 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 4 ಕೋಟಿ 29 ಲಕ್ಷದ 71 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 5,15,210 ಆಗಿದೆ. ಕಳೆದ 24 ಗಂಟೆಗಳಲ್ಲಿ 8,055 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 4 ಕೋಟಿ 24 ಲಕ್ಷದ 06 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 49 ಸಾವಿರಕ್ಕು ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತದಲ್ಲಿ ಗುಣಮುಖ ಪ್ರಮಾಣ 98.68 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.20 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 21.34 ಲಕ್ಷಕ್ಕು ಅಧಿಕ ಡೋಸ್ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 179.13 ಕೋಟಿಗು ಅಧಿಕ ಡೋಸ್ ಲಸಿಕೆ ಹಾಕಿದಂತಾಗಿದೆ. -masthmagaa.com Share on: WhatsAppContact Us for AdvertisementRead More →