masthmagaa.com: 2018ರಲ್ಲಿ ನಡೆದ ಇಂಟೀರಿಯರ್ ಡಿಸೈನರ್​ ಮತ್ತು ಆತನ ತಾಯಿಯ ಆತ್ಮಹತ್ಯೆ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರಿಂದ ಅರೆಸ್ಟ್ ಆಗಿದ್ದ ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್​ನಲ್ಲಿ ಗೆಲುವು ಸಿಕ್ಕಿದೆ. ಪ್ರಕರಣದಲ್ಲಿ ಬಂಧಿತರಾಗಿರುವ ಅರ್ನಬ್ ಮತ್ತು ಇನ್ನಿಬ್ಬರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಮೂವರಿದಂಲೂ ತಲಾ 50 ಸಾವಿರ ರೂಪಾಯಿ ಬಾಂಡ್ ಅನ್ನು ಬರೆಸಿಕೊಂಡು ತಕ್ಷಣವೇ ಬಿಡುಗಡೆ ಮಾಡುವಂತೆ ಪೊಲೀಸರಿಗೆ ಕೋರ್ಟ್​ ಸೂಚಿಸಿದೆ. ಇಷ್ಟೇ ಅಲ್ಲ, ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದ ಬಾಂಬೆ ಹೈಕೋರ್ಟ್​ಗೆ ಚಾಟಿ ಬೀಸಿರುವ ಸುಪ್ರೀಂಕೋರ್ಟ್​ ಮಹಾರಾಷ್ಟ್ರ ಸರ್ಕಾರಕ್ಕೂ ಕಠಿಣ ಸಂದೇಶ ರವಾನಿಸಿದೆ. ‘ವೈಯಕ್ತಿಕ ಸ್ವಾತಂತ್ರ್ಯವನ್ನ ನಿರಾಕರಿಸಿರುವ ಪ್ರಕರಣದಲ್ಲಿ ಹೈಕೋರ್ಟ್​ ಸರಿಯಾಗಿ ನಡೆದುಕೊಂಡಿಲ್ಲ. ಒಂದ್ವೇಳೆ ಇವತ್ತು ಸುಪ್ರೀಂಕೋರ್ಟ್​ ಮಧ್ಯಪ್ರವೇಶಿಸದಿದ್ದರೆ ನಾವು ವೈಯಕ್ತಿಕ ಸ್ವಾತಂತ್ರ್ಯವನ್ನು ವಿನಾಶಗೊಳಿಸುವ ಹಾದಿಯಲ್ಲಿ ಹೋಗುತ್ತಿದ್ದೆವು. ಯಾರದ್ದಾದ್ರೂ ಬಾಯಿ ಮುಚ್ಚಿಸಬೇಕು ಅಂದ್ರೆ ನಮ್ಮ ರಾಜ್ಯ ಸರ್ಕಾರಗಳು ಈ ರೀತಿ ಮಾಡೋದಾ..? ನಿಮಗೆ ಇಷ್ಟ ಇಲ್ಲ ಅಂದ್ರೆ ಆ ಚಾನಲ್ ನೋಡಬೇಡಿ. ನಾನು ಕೂಡ ಆ ಚಾನಲ್ ನೋಡಲ್ಲ. ಇಂತಹRead More →

masthmagaa.com: ‘ಮಹಾರಾಷ್ಟ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ ಆಗುತ್ತಿದೆ. ನಾನು ಮುಖ್ಯಮಂತ್ರಿ ಆದಾಗಿನಿಂದಲೂ ಸರ್ಕಾರವನ್ನು ಉರುಳಿಸಲಾಗುತ್ತೆ ಅಂತ ಹೇಳಲಾಗುತ್ತಿತ್ತು. ತಾಕತ್ತಿದ್ರೆ ನಮ್ಮ ಸರ್ಕಾರವನ್ನು ಉರುಳಿಸಿ ತೋರಿಸಿ’ ಅಂತ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಗುಡುಗಿದ್ದಾರೆ. ಶಿವಸೇನೆ ನಡೆಸಿದ ವಾರ್ಷಿಕ ದಸರಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡುವಾಗ ಈ ರೀತಿ ಹೇಳಿದ್ದಾರೆ. ಮುಂದುವರೆದು ಮಾತನಾಡಿದ ಅವರು, ‘ನಮ್ಮ ರಾಜ್ಯದಲ್ಲಿ ದೇವಸ್ಥಾನಗಳನ್ನು ಯಾಕೆ ಓಪನ್ ಮಾಡ್ತಿಲ್ಲ ಅಂತ ಹಿಂದುತ್ವದ ಬಗ್ಗೆ ಪ್ರಶ್ನೆ ಮಾಡಲಾಗುತ್ತಿದೆ. ಬಾಳ್​ ಠಾಕ್ರೆಗಿಂತ ನನ್ನ ಹಿಂದುತ್ವ ಭಿನ್ನವಾಗಿದೆ ಅಂತ ಹೇಳುತ್ತಿದ್ದಾರೆ. ನಿಮ್ಮ ಹಿಂದುತ್ವ ಗಂಟೆ ಬಾರಿಸೋದು, ತಟ್ಟೆಗಳನ್ನು ತಟ್ಟೋದು. ಆದ್ರೆ ನನ್ನ ಹಿಂದುತ್ವ ಹಾಗಲ್ಲ. ಬಿಹಾರದಲ್ಲಿ ಉಚಿತ ಲಸಿಕೆ ಕೊಡುವ ಬಗ್ಗೆ ಮಾತನಾಡುತ್ತಿದ್ದೀರಿ. ಹಾಗಿದ್ರೆ ದೇಶದ ಉಳಿದ ಭಾಗ ಪಾಕಿಸ್ತಾನ ಅಥವಾ ಬಾಂಗ್ಲಾದೇಶಕ್ಕೆ ಸೇರಿದೆಯಾ..? ಬಿಹಾರಕ್ಕೆ ಉಚಿತ ಲಸಿಕೆ ಅಂತ ಮಾತನಾಡೋರಿಗೆ ನಾಚಿಕೆಯಾಗಬೇಕು. ಕೇಂದ್ರದಲ್ಲಿ ಅಧಿಕಾರದಲ್ಲಿದ್ದುಕೊಂಡೇ ಈ ರೀತಿ ಮಾತಾಡ್ತಿರಲಾ’ ಅಂತ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮತ್ತೊಂದುಕಡೆ ಶಿವಸೇನೆ ಸಂಸದ ಸಂಜಯ್ ರಾವತ್ ಮಾತನಾಡಿ,Read More →

masthmagaa.com: ಸ್ಯಾಂಡಲ್​ವುಡ್​ ಡ್ರಗ್ಸ್ ಪ್ರಕರಣದ ಆರೋಪಿ ಆದಿತ್ಯ ಆಳ್ವನನ್ನು ಹುಡುಕಿಕೊಂಡು ಬೆಂಗಳೂರಿನ ಸಿಸಿಬಿ ಪೊಲೀಸರು ನಿನ್ನೆ ಮುಂಬೈಗೆ ಹೋಗಿದ್ದರು. ಮುಂಬೈನಲ್ಲಿರುವ ಬಾಲಿವುಡ್​ ನಟ ವಿವೇಕ್ ಒಬೆರಾಯ್ ಮನೆ ಮೇಲೆ ದಾಳಿ ನಡೆಸಿ ಶೋಧಕಾರ್ಯ ನಡೆಸಿದ್ದರು. ಅಂದ್ಹಾಗೆ ವಿವೇಕ್ ಒಬೆರಾಯ್ ಅವರ ಪತ್ನಿ ಪ್ರಿಯಾಂಕಾ ಆಳ್ವ ಒಬೆರಾಯ್ ಅವರು ಆದಿತ್ಯ ಆಳ್ವ ಅವರ ಸಹೋದರಿ. ಈ ಸಂಬಂಧ ಸಿಸಿಬಿ ಪೊಲೀಸರು ಪ್ರಿಯಾಂಕಾ ಆಳ್ವಗೂ ನೋಟಿಸ್ ನೀಡಿದ್ದಾರೆ. ಇದೀಗ ಸಿಸಿಬಿ ಪೊಲೀಸರ ಕಾರ್ಯಾಚರಣೆ ಬಗ್ಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಅಂದ್ರೆ, ‘ಡ್ರಗ್​ ಪ್ರಕರಣದಲ್ಲಿ ವಿವೇಕ್ ಒಬೆರಾಯ್ ಮತ್ತು ಸಂದೀಪ್​ ಸಿಂಗ್​ನನ್ನು ವಿಚಾರಣೆ ನಡೆಸಲು ಬೆಂಗಳೂರು ಪೊಲೀಸರು ಮುಂಬೈಗೆ ಬಂದಿದ್ದರು. ಆದ್ರೆ ಎನ್​ಸಿಬಿ ಈ ಬಗ್ಗೆ ತನಿಖೆ ನಡೆಸುತ್ತಿಲ್ಲ. ಅವರಿಗೆ ಮೇಲಿನಿಂದ ಒತ್ತಡ ಹೇರಲಾಗುತ್ತಿದೆ. ಡ್ರಗ್​ ಕೇಸ್​ನಲ್ಲಿ ವಿವೇಕ್ ಒಬೆರಾಯ್ ಲಿಂಕ್​ ಬಗ್ಗೆ ಎನ್​ಸಿಬಿ ತನಿಖೆ ನಡೆಸಬೇಕು ಅಂತ ನಾವು ಮನವಿ ಮಾಡುತ್ತೇವೆ. ಒಂದ್ವೇಳೆ ಅವರಿಗೆ ಆಗದಿದ್ದರೆ ಮುಂಬೈ ಪೊಲೀಸರೇ ತನಿಖೆ ನಡೆಸುತ್ತಾರೆ’ ಅಂತ ಅನಿಲ್Read More →

masthmagaa.com: ಸುಶಾಂತ್ ಸಿಂಗ್ ರಜಪೂತ್​ ಸಾವಿನ ಪ್ರಕರಣ, ಬಾಲಿವುಡ್​ನಲ್ಲಿ ಡ್ರಗ್ಸ್​ ಮಾಫಿಯಾ, ಕಂಗನಾ ರನಾವತ್ ವಿರುದ್ಧ ಯುದ್ಧ, ನೌಕಾಪಡೆಯ ಮಾಜಿ ಅಧಿಕಾರಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಸೇರಿದಂತೆ ಸಾಲು ಸಾಲು ಪ್ರಕರಣಗಳಲ್ಲಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ, ಆಕ್ರೋಶಗಳು ವ್ಯಕ್ತವಾಗಿದೆ. ಮುಂಬೈನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಅನ್ನೋ ಮಾತುಗಳು ಕೇಳಿ ಬರ್ತಿವೆ. ಈ ಬಗ್ಗೆ ಇಷ್ಟುದಿನ ಏನೂ ಮಾತನಾಡದೆ ಸುಮ್ಮನಾಗಿದ್ದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮೌನ ಮುರಿದಿದ್ದು, ಇದೆಲ್ಲದರ ಹಿಂದೆ ರಾಜಕೀಯ ಪಿತೂರಿ ನಡೀತಿದೆ ಎಂದಿದ್ದಾರೆ. ‘ಕೊರೋನಾ ಹಾವಳಿ ಮುಗಿದಿದೆ ಅಂತ ಕೆಲವರು ಅಂದುಕೊಂಡಿದ್ದು ಮತ್ತೆ ತಮ್ಮ ರಾಜಕೀಯವನ್ನು ಪ್ರಾರಂಭಿಸಿದ್ದಾರೆ. ನಾನು ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ. ಆದ್ರೆ ಮಹಾರಾಷ್ಟ್ರದ ಹೆಸರನ್ನು ಕೆಡಿಸಲು ಪಿತೂರಿ ನಡೆಯುತ್ತಿದೆ. ನಾನು ಮೌನವಾಗಿದ್ದೀನಿ ಅಂದ್ರೆ ಅದರರ್ಥ ನನ್ನ ಬಳಿ ಉತ್ತರಗಳಿಲ್ಲ ಅಂತಲ್ಲ’ ಅಂತ ಉದ್ಧವ್ ಠಾಕ್ರೆ ಸಿಡಿದೆದ್ದಿದ್ದಾರೆ. ಇನ್ನು ಹಲ್ಲೆಗೊಳಗಾದ ನೌಕಾಪಡೆಯ ಮಾಜಿ ಅಧಿಕಾರಿ ಮದನ್ ಶರ್ಮಾ ಅವರು ಉದ್ಧವ್ ರಾಜೀನಾಮೆಗೆ ಆಗ್ರಹಿಸಿದ್ದಾರೆ. ‘ಸರ್ಕಾರವನ್ನು ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ.Read More →