masthmagaa.com: ಖ್ಯಾತ ಉದ್ಯಮಿ ವಿಜಯ ಸಂಕೇಶ್ವರ ಅವರ ಜೀವನಾಧಾರಿತ ಚಿತ್ರ “ವಿಜಯಾನಂದ”. ಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಸಂಗೀತ ನೀಡಿರುವ ಈ ಚಿತ್ರದ “ಹಾಗೆ ಆದ ಆಲಿಂಗನ” ಎಂಬ ಹಾಡು ಬಿಡುಗಡೆಯಾಗಿದೆ. ಧನಂಜಯ್ ರಂಜನ್ ಬರೆದಿರುವ ಈ ಹಾಡನ್ನು ವಿಜಯ್ ಪ್ರಕಾಶ್ ಹಾಗೂ ಕೀರ್ತನಾ ವೈದ್ಯನಾಥನ್ ಇಂಪಾಗಿ ಹಾಡಿದ್ದಾರೆ. ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ಈ ಹಾಡು ಬಿಡುಗಡೆಯಾಯಿತು. ಮಲೆಯಾಳಂನ ಖ್ಯಾತ ಸಂಗೀತ ನಿರ್ದೇಶಕರಾದ ಗೋಪಿ ಸುಂದರ್, “ಗೀತಾ ಗೋವಿಂದಂ” ಸೇರಿದಂತೆ ಮುನ್ನೂರಕ್ಕೂ ಅಧಿಕ ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. ಕನ್ನಡದಲ್ಲಿ ಇದು ಮೊದಲ ಚಿತ್ರ. ಇಮ್ರಾನ್ ಸರ್ದಾರಿಯಾ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಹಾಡು ಬಿಡುಗಡೆ ಸಮಾರಂಭದಲ್ಲಿ ವಿಜಯ ಸಂಕೇಶ್ವರ ಚಿತ್ರದ ಕುರಿತು ಮಾತನಾಡಿದರು. ನನ್ನ‌ ಜೀವನಾಧಾರಿತ ಸಿನಿಮಾ ಮಾಡುವುದಾಗಿ ನಿರ್ದೇಶಕಿ ರಿಶಿಕಾ ಶರ್ಮ ಕೇಳಿದಾಗ, ಈ ಚಿಕ್ಕ ಹುಡುಗಿ ಏನು ಮಾಡುತ್ತಾಳೆ? ಅನಿಸಿತು. ಆದರೆ ಈಗ, ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ರಿಶಿಕಾ ಬಹಳ ಚೆನ್ನಾಗಿ ಸಿನಿಮಾ ಮಾಡಿದ್ದಾರೆ. ನನ್ನ ಮಗ ಆನಂದ್ ಈRead More →