masthmagaa.com: ದೇಶದ್ರೋಹ ಆರೋಪ ಎದುರಿಸುತ್ತಿರುವ ಬಾಲಿವುಡ್‌ ನಟಿ ಕಂಗನಾ ರಣಾವತ್‌ ಹಾಗೂ ಆಕೆಯ ಸಹೋದರಿ ರಂಗೋಲಿ ಚಂಡೇಲ್ ಸಲ್ಲಿಸಿದ್ದ ಅರ್ಜಿಯ‌ ವಿಚಾರಣೆ ಇಂದು ಬಾಂಬೆ ಹೈಕೋರ್ಟ್‌ನಲ್ಲಿ ನಡೆಯಿತು. ಈ ವೇಳೆ ಕೋರ್ಟ್‌ ಕಂಗನಾ ಹಾಗೂ ಆಕೆಯ ಸಹೋದರಿಗೆ ಜನವರಿ 8ರಂದು ಮುಂಬೈ ಪೊಲೀಸರ ಮುಂದೆ ಹಾಜರಾಗುವಂತೆ ಹೇಳಿದೆ. ಅಲ್ಲಿವರೆಗೆ ಮುಂಬೈ ಪೊಲೀಸರು ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಆದೇಶಿಸಿದೆ. ಇದರಿಂದ ಇಬ್ಬರಿಗೂ ರಿಲೀಫ್‌ ಸಿಕ್ಕಿದೆ. ಸಾಮಾಜಿಕ ಜಾಲತಾಣಗಳ ಮುಖಾಂತರ ಎರಡು ಸಮುದಾಯಗಳ ಮಧ್ಯೆ ಕೋಮು ದ್ವೇಷ ಸೃಷ್ಟಿ ಮಾಡಿದ ಆರೋಪಕ್ಕೆ  ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕಂಗನಾ ಮತ್ತು ರಂಗೋಲಿಗೆ ಮುಂಬೈ ಪೊಲೀಸರು ಎರಡು ಬಾರಿ ಸಮನ್ಸ್‌ ಜಾರಿ ಮಾಡಿದ್ದರು. ಆದ್ರೆ ಸಹೋದರನ ಮದುವೆ ಕಾರಣವೊಡ್ಡಿ‌ ಇಬ್ಬರೂ ವಿಚಾರಣೆಗೆ ಗೈರಾಗಿದ್ದರು. ಅಲ್ಲದೇ ತಮ್ಮ ಮೇಲಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. -masthmagaa.com Share on: WhatsAppContact Us for AdvertisementRead More →

masthmagaa.com: ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತು ಆಕೆಯ ಸೋದರಿ ರಂಗೋಲಿ ಚಾಂಡೆಲ್ ವಿರುದ್ಧ FIR ದಾಖಲಿಸುವಂತೆ ಬಾಂದ್ರಾ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ನೀಡಿದೆ. ಈ ಬಗ್ಗೆ ಅರ್ಜಿ ಸಲ್ಲಿಸಿದ್ದ ಕಾಸ್ಟಿಂಗ್ ಡೈರೆಕ್ಟರ್ ಸಾಹಿಲ್ ಸೈಯ್ಯದ್, ಕಂಗನಾ ಮತ್ತು ಆಕೆಯ ಸಹೋದರಿ ರಂಗೋಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದು, ಕಲಾವಿದರನ್ನು ಹಿಂದೂ-ಮುಸ್ಲಿಂ ಎಂದು ವಿಭಜಿಸಿದ್ದಾರೆ. ಜೊತೆಗೆ ಎರಡು ಕೋಮುಗಳ ನಡುವೆ ದ್ವೇಷ ಭಾವನೆ ಪ್ರಚೋದಿಸಿದ್ದಾರೆ ಅಂತ ಆರೋಪಿಸಿದ್ರು. ಅಲ್ಲದೆ ಕಂಗನಾ ಮಾಡಿದ್ದ ಕೆಲವೊಂದು ಟ್ವೀಟ್​​ಗಳನ್ನು ಕೂಡ ಸಾಕ್ಷಿಯಾಗಿ ನೀಡಿ, ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಅಲ್ಲದೆ ಕಂಗನಾ ರಾಣಾವತ್ ಓರ್ವ ಪ್ರಸಿದ್ಧ ನಟಿಯಾಗಿದ್ದು, ದೊಡ್ಡ ಪ್ರಮಾಣದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಾಗಿ ಅವರ ಟ್ವೀಟ್​ ತುಂಬಾ ಜನರನ್ನು ರೀಚ್ ಆಗುತ್ತೆ ಅಂತ ಸಾಹಿಲ್ ಸಯ್ಯದ್ ಮಾಹಿತಿ ನೀಡಿದ್ರು. ಅರ್ಜಿ ವಿಚಾರಣೆ ನಡೆಸಿದ ಬಾಂದ್ರಾದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್​​ ಕೋರ್ಟ್​​​, ಕಂಗನಾ ಮತ್ತು ಆಕೆಯ ಸಹೋದರಿ ರಂಗೋಲಿ ವಿರುದ್ಧ ಎಫ್​​​​ಐಆರ್ ದಾಖಲಿಸುವಂತೆ ಬಾಂದ್ರಾ ಪೊಲೀಸರಿಗೆ ಸೂಚನೆ ನೀಡಿದೆ. ಮ್ಯಾಜಿಸ್ಟ್ರೇಟ್ ಜಯದೇವ್ ಘುಲೆRead More →