ಅಜಯ್ ರಾವ್ ಹೊಸ ಸಿನಿಮಾಗೆ ‘ಯುದ್ಧಕಾಂಡ’ ಟೈಟಲ್ ಫಿಕ್ಸ್ – ನವನಿರ್ದೇಶಕನ ಗರಡಿಯಲ್ಲಿ ವಕೀಲನಾದ ಲವರ್ ಬಾಯ್ !
masthmagaa.com: ತಾಜ್ ಮಹಲ್, ಕೃಷ್ಣ ಲೀಲಾ, ಕೃಷ್ಣ ರುಕ್ಮಿಣಿ ಖ್ಯಾತಿಯ ನಟ ಅಜಯ್ ರಾವ್ ಸ್ಯಾಂಡಲ್ ವುಡ್ ಯುವ ನಿರ್ದೇಶಕನೊಂದಿಗೆ ಹೊಸ ಸಿನಿಮಾ ಘೋಷಿಸಿದ್ದಾರೆ. ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದ್ದು, ಚಿತ್ರಕ್ಕೆ ‘ಯುದ್ಧಕಾಂಡ’ ಎಂದು ಟೈಟಲ್ ಇಡಲಾಗಿದೆ. ಸಖತ್ ಇಂಟ್ರಸ್ಟಿಂಗ್ ಆಗಿರೋ ಟೈಟಲ್ ಟೀಸರ್ ಸಿನಿರಸಿಕರ ಗಮನ ಸೆಳೆಯುತ್ತಿದೆ. ಈ ಚಿತ್ರವನ್ನು ಅಜಯ್ ರಾವ್ ತಮ್ಮದೇ ನಿರ್ಮಾಣ ಸಂಸ್ಥೆ ‘ಶ್ರೀಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್’ ಮತ್ತು ‘ಅಜಯ್ ರಾವ್ ಪ್ರೊಡಕ್ಷನ್ಸ್’ ನಡಿ ನಿರ್ಮಾಣ ಮಾಡುತ್ತಿದ್ದಾರೆ. ಈ ಮೂಲಕ ಕೃಷ್ಣ ಲೀಲಾ ಸಿನಿಮಾ ನಂತರ ಮತ್ತೊಮ್ಮೆ ನಿರ್ಮಾಣ ಸಾಹಸಕ್ಕೆ ಮುಂದಾಗಿದ್ದಾರೆ. ಚಿತ್ರದಲ್ಲಿ ವಕೀಲರಾಗಿ ಕಾಣಿಸಿಕೊಳ್ಳುತ್ತಿರುವ ಅಜಯ್ ರಾವ್ ಸಿನಿಮಾವನ್ನು ವಕೀಲರಿಂದಲೇ ಲಾಂಚ್ ಮಾಡಿಸಿದ್ದು ವಿಶೇಷವಾಗಿತ್ತು. ‘ಯುದ್ಧಕಾಂಡ’ ಎಂದಾಗ ಎಲ್ಲರಿಗೂ ನೆನಪಾಗೋದು ಲೆಜೆಂಡರಿ ರವಿ ಸರ್ ಸಿನಿಮಾ. ಆ ಸಿನಿಮಾದ ನಿರ್ದೇಶಕರಾದ ಕೆ. ವಿ ರಾಜು ಸರ್ ಜೊತೆ ನಾನು ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದೇನೆ ಅದು ನನ್ನ ಅದೃಷ್ಟ. ಈ ಸಿನಿಮಾ ಲಾಂಚ್ ಮಾಡೋವಾಗ ಮೊದಲು ರವಿ ಸರ್Read More →