ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಮತ್ತೆ ಉಗ್ರರ ದಾಳಿ

ಜಮ್ಮು ಕಾಶ್ಮೀರದ  ಪುಲ್ವಾಮಾದಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ಶಾಲೆಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಆರ್​​ಪಿಎಫ್ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ರೀತಿಯ ಹಾನಿಯಾಗಿಲ್ಲ. 6ರಿಂದ 7 ಸುತ್ತು ಗುಂಡು ಹಾರಿಸಿದ ಉಗ್ರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ದ್ರಬ್​​​ಗಾಮ್​​ನಲ್ಲಿರುವ ಶಾಲೆ ಇದಾಗಿದ್ದು, ಮಕ್ಕಳು ಪರೀಕ್ಷೆ ಬರೆಯುತ್ತಿದ್ದರು ಎನ್ನಲಾಗಿದೆ. ಸದ್ಯ ಆ ಪ್ರದೇಶವನ್ನು ಸುತ್ತವರಿದಿರುವ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಬೆಳಗ್ಗೆಯಷ್ಟೇ ಯೂರೋಪಿಯನ್ ಒಕ್ಕೂಟದ ಸದಸ್ಯರು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದರು. ಅದ್ರ ಬೆನ್ನಲ್ಲೇ ಈ ದಾಳಿ ನಡೆದಿದೆ.

Contact Us for Advertisement

Leave a Reply