ದೇಶದಲ್ಲಿ ಒಂದೇ ದಿನ 1000 ಮಂದಿಗೆ ಸೋಂಕು.. 260 ಜನ ಗುಣಮುಖ..!

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,005 ಜನರಿಗೆ ಕೊರೋನಾ ಸೋಂಕು ತಗುಲಿದೆ ಅಂತ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಈ ಅವಧಿಯಲ್ಲಿ 23 ಮಂದಿ ಪ್ರಾಣ ಕಳೆದುಕೊಂಡಿದ್ದು, 260 ಮಂದಿ ಗುಣಮುಖರಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 13,387ಕ್ಕೆ ಏರಿಕೆಯಾಗಿದ್ದು, 437 ಜನ ಬಲಿಯಾದಂತಾಗಿದೆ.

ಇದುವರೆಗೆ 1,749 ಮಂದಿ ಗುಣಮುಖರಾಗಿದ್ದು, ದೇಶದಲ್ಲಿ ಗುಣಮುಖರಾಗುವವರ ಪ್ರಮಾಣ 13 ಪರ್ಸೆಂಟ್ ಇದೆ. ಸದ್ಯ ದೇಶದಲ್ಲಿ 11,201 ಪ್ರಕರಣಗಳು ಸಕ್ರಿಯವಾಗಿವೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 3 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದೃಢಪಟ್ಟಿದ್ದು, 194 ಜನ ಮೃತಪಟ್ಟಿದ್ದಾರೆ. ದೆಹಲಿ, ತಮಿಳುನಾಡು, ರಾಜಸ್ಥಾನ ಮತ್ತು ಮಧ್ಯಪ್ರದೇಶಗಳಲ್ಲಿ ಸಾವಿರಕ್ಕೂ ಹೆಚ್ಚು ಜನರಿಗೆ ಕೊರೋನಾ ಸೋಂಕು ತಗುಲಿದೆ. ಕರ್ನಾಟಕ 11ನೇ ಸ್ಥಾನದಲ್ಲಿದೆ.

-masthmagaa.com

Contact Us for Advertisement

Leave a Reply