ಪಂಚಭೂತಗಳಲ್ಲಿ ಲೀನರಾದ ಅಭಿನಯ ಶಾರದೆ ಜಯಂತಿ

masthmagaa.com:

ಕನ್ನಡ ಚಿತ್ರರಂಗದಲ್ಲಿ ಅಭಿನಯ ಶಾರದೆ ಎಂದೇ ಕರೆಯಲ್ಪಡುತಿದ್ದ ದಕ್ಷಿಣ ಭಾರತ ಚಿತ್ರರಂಗದ ಮೇರು ನಟಿ ಜಯಂತಿ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ನಸುಕಿನ ಜಾವ ಬೆಂಗಳೂರಿನ ತಮ್ಮ ನಿವಾಸದಲ್ಲಿ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ವರ್ಷಗಳಿಂದ ಅಸ್ತಮಾ,ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ನಟಿ ಕಳೆದ ವರ್ಷ ಕೋವಿಡ್-19 ಸಮಯದಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ 40 ದಿನಗಳ ಕಾಲ ಇದ್ದು ಚೇತರಿಸಿಕೊಂಡು ಮನೆಗೆ ಹಿಂತಿರುಗಿದ್ದರು. ಆದರೆ ಇಂದು ಕೊನೆಯುಸಿರೆಳೆದಿದ್ದಾರೆ. ಸಂಜೆ ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯ್ತು.
ಕನ್ನಡ, ತೆಲಗು, ತಮಿಳು, ಮಲಯಾಳಂ, ಹಿಂದಿ ಮತ್ತು ಮರಾಠಿ ಭಾಷೆಗಳೆಲ್ಲ ಸೇರಿ ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಜಯಂತಿ, ಅಣ್ಣಾವ್ರು ರಾಜ್ ಕುಮಾರ್ ಜೊತೆಯಲ್ಲೇ 45 ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದರು.

-masthmagaa.com

Contact Us for Advertisement

Leave a Reply