ರಾಜ್ಯದ ಇವತ್ತಿನ ಹವಾಮಾನ ವರದಿ ಹೀಗಿದೆ ನೋಡಿ..

masthmagaa.com:

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಐರೋಡಿ ಗ್ರಾಮದಲ್ಲಿ ಅತಿಹೆಚ್ಚು 304 ಮಿಲಿ ಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳ ಕೆಲವೊಂದುಕಡೆ ಭಾರಿ ಮಳೆ, ಬಹುತೇಕ ಕಡೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳ ಕೆಲವೊಂದು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಕೆಲವೊಂದು ಕಡೆ ಭಾರಿ ಮಳೆ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

-masthmagaa.com

Contact Us for Advertisement

Leave a Reply