ರಾಜ್ಯದಲ್ಲಿ ಎಲ್ಲೆಲ್ಲಿ ಮಳೆಯಾಗಿದೆ? ಹವಾಮಾನ ವರದಿ ಹೇಗಿದೆ?

masthmagaa.com:

ರಾಜ್ಯದ ಕೆಲವೊಂದುಕಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಜಳಕಿ ಗ್ರಾಮದಲ್ಲಿ ಅತಿಹೆಚ್ಚು 63 ಮಿಲಿಮೀಟರ್​ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯದ ಕೆಲವೊಂದುಕಡೆ ಭಾರಿ ಮಳೆ ಮತ್ತು ಬಹುತೇಕ ಕಡೆ ಸಾಧರಣ ಮಳೆಯಾಗೋ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಉತ್ತರಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

-masthmagaa.com

Contact Us for Advertisement

Leave a Reply