ಹವಾಮಾನ ವರದಿ : ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

masthmagaa.com:

ರಾಜ್ಯದ ಕರಾವಳಿ ಸೇರಿದಂತೆ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಎಂಬಲ್ಲಿ ಅತಿಹೆಚ್ಚು 205 ಮಿಲಿಮೀಟರ್​ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯದ ಕೆಲವೊಂದುಕಡೆ ಭಾರಿ ಮಳೆ ಮತ್ತು ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಅಲ್ಲಲ್ಲಿ ಗುಡುಗು ಮಿಂಚು ಸಂಭವಿಸುವ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ಉತ್ತರ ಅಂಡಮಾನ್​ ಸಮುದ್ರದಲ್ಲಿ ಕಡಿಮೆ ಒತ್ತಡದ ಪ್ರದೇಶ ಸೃಷ್ಟಿಯಾಗಿರೋ ಬೆನ್ನಲ್ಲೇ ಇದೀಗ, ದಕ್ಷಿಣ ಮಹಾರಾಷ್ಟ್ರ ಕರಾವಳಿಯ ಅರಬ್ಬಿ ಸಮುದ್ರದಲ್ಲೂ ಕಡಿಮೆ ಒತ್ತಡದ ಪ್ರದೇಶ ಸೃಷ್ಟಿಯಾಗ್ತಿದೆ ಅಂತ ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆ ಕರ್ನಾಟಕದ ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ನವೆಂಬರ್​​ 16ನೇ ತಾರೀಖಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

-masthmagaa.com

Contact Us for Advertisement

Leave a Reply