ರಾಜ್ಯದ ಇವತ್ತಿನ ಹವಾಮಾನ ವರದಿ ಹೀಗಿದೆ ನೋಡಿ..

masthmagaa.com:

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಅತಿಹೆಚ್ಚು 107 ಮಿಲಿ ಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳ ಕೆಲವೊಂದು ಕಡೆ ಭಾರಿ ಮಳೆಯಾಗಲಿದೆ. ಈ ಭಾಗದ ಬಹುತೇಕ ಕಡೆ ಸಣ್ಣ ಅಥವಾ ಮಧ್ಯಮ ಪ್ರಮಾಣದ ಮಳೆಯಾಗಲಿದೆ. ಇನ್ನು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಣ್ಣ ಅಥವಾ ಮಧ್ಯಮ ಪ್ರಮಾಣದಲ್ಲಿ ಮಳೆಯಾಗಲಿದೆ. ಬೆಂಗಳೂರಿನ ಕೆಲವೊಂದು ಕಡೆ ಭಾರಿ ಮಳೆ, ಬಹುತೇಕ ಕಡೆ ಸಣ್ಣ ಅಥವಾ ಮಧ್ಯಮ ಪ್ರಮಾಣದ ಮಳೆಯಾಗಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ರಾಜ್ಯದ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳನ್ನ ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

-masthmagaa.com

Contact Us for Advertisement

Leave a Reply