ದೇಶದಲ್ಲಿ ಸೋಂಕಿತರ ಸಂಖ್ಯೆ 873ಕ್ಕೆ ಏರಿಕೆ.. ರಾಜ್ಯವಾರು ಪಟ್ಟಿ ಇಲ್ಲಿದೆ..

masthmagaa.com:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 873ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಇದರಲ್ಲಿ 47 ಮಂದಿ ವಿದೇಶಿ ಪ್ರಜೆಗಳು ಕೂಡ ಸೇರಿದ್ದಾರೆ. ಅಲ್ಲದೆ ಇದುವರೆಗೆ 79 ಮಂದಿ ಕಾಯಿಲೆಯಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಶುಕ್ರವಾರ ಒಂದೇ ದಿನ 149 ಹೊಸ ಪ್ರಕರಣಗಳು ಪತ್ತೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ.

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 180 ಜನರಿಗೆ ಸೋಂಕು ತಗುಲಿದ್ದು, 5 ಜನ ಮೃತಪಟ್ಟಿದ್ದಾರೆ. ಕೇರಳದಲ್ಲಿ 173 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಗುಜರಾತ್​ ಹಾಗೂ ಕರ್ನಾಟಕದಲ್ಲಿ ತಲಾ ಮೂವರು ಮೃತಪಟ್ಟಿದ್ದಾರೆ. ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರೋ ರಾಜ್ಯವಾರು ಪಟ್ಟಿಯಲ್ಲಿ ತುಮಕೂರಿನ ಶಿರಾದಲ್ಲಿ ಶುಕ್ರವಾರ ಮೃತಪಟ್ಟ ವ್ಯಕ್ತಿಯ ಬಗ್ಗೆ ಮಾಹಿತಿ ಇಲ್ಲ. ಹೀಗಾಗಿ ಕರ್ನಾಟಕದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಅಂತ ತೋರಿಸಲಾಗಿದೆ.

-masthmagaa.com

Contact Us for Advertisement

Leave a Reply