ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕಾಗಿ ಪ್ರತಿಭಟನೆ: ರಾಹುಲ್ ಗಾಂಧಿ ಬೆಂಬಲ

ಬಂಡೀಪುರ ರಾಷ್ಟ್ರೀಯ ಉದ್ಯಾನ ಪ್ರದೇಶದ ಹೈವೇನಲ್ಲಿ ರಾತ್ರಿ ಸಂಚಾರ ನಿಷೇಧ ವಿರೋಧಿಸಿ ಕೇರಳದಲ್ಲಿ ಧರಣಿ ಕುಳಿತವರಿಗೆ ರಾಹುಲ್ ಗಾಂಧಿ ಬೆಂಬಲಿಸಿದ್ದಾರೆ. ಕರ್ನಾಟಕ-ಕೇರಳ ಸಂಪರ್ಕಿಸುವ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ನಿಬರ್ಂಧ ತೆರವುಗೊಳಿಸಲು ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಕೇರಳ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುತ್ತಲೇ ಇದೆ. ಆದ್ರೆ ಈ ಮನವಿಯನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ. ಅಲ್ಲದೆ ಈ ಯೋಜನೆಗೆ ಅನುಮತಿ ನೀಡಿದ್ರೆ ಭಾರಿ ಪ್ರಮಾಣದಲ್ಲಿ ಅರಣ್ಯ ನಾಶವಾಗುತ್ತೆ. ಹೀಗಾಗಿ ಈ ರೀತಿಯ ಯೋಜನೆಗಳನ್ನು ಪ್ರೋತ್ಸಾಹಿಸಲ್ಲ ಎಂದು ಕೇಂದ್ರ ಈಗಾಗಲೇ ಸ್ಪಷ್ಟಪಡಿಸಿದೆ. ಹೀಗಾಗಿ ಕೇರಳದಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ರಾಹುಲ್ ಗಾಂಧಿ ಪ್ರತಿನಿಧಿಸುವ ಕೇರಳದ ವಾಯನಾಡ್ ಕ್ಷೇತ್ರದಲ್ಲೂ ಮುಷ್ಕರ ಜೋರಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಮುಷ್ಕರಕ್ಕೆ ನನ್ನ ಬೆಂಬಲವಿದೆ. ಈ ಯುವಕರೊಂದಿಗೆ ನಾನು ನಿಲ್ಲುತ್ತೇನೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಸ್ಥಳೀಯರ ಹಿತಕಾಯಲು ಕ್ರಮ ಕೈಗೊಳ್ಳಬೇಕು. ಜೊತೆಗೆ ಪರಿಸರ ರಕ್ಷಿಸುವ ಜವಾಬ್ದಾರಿ ಕೂಡಾ ಎಲ್ಲರ ಮೇಲಿದೆ ಎಂದು ಹೇಳಿದ್ದಾರೆ.

Contact Us for Advertisement

Leave a Reply