ಸಾರಿಗೆ ನೌಕರರ ಮುಷ್ಕರ ಅಂತ್ಯ…ಬಿಎಂಟಿಸಿ ಮತ್ತು ಕೆಎಸ್​ಆರ್​ಟಿಸಿ ಬಸ್​ ಸಂಚಾರ

masthmagaa.com:

ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ನಡೆಯುತ್ತಿದ್ದ ಸಾರಿಗೆ ನೌಕರರ ಮುಷ್ಕರವನ್ನ ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಕೊರೋನಾ ಕಾರಣದಿಂದ ಕರ್ತವ್ಯಕ್ಕೆ ಹಾಜರಾಗುವಂತೆ ಹೈಕೋರ್ಟ್​ ಸೂಚನೆ ಕೊಟ್ಟಿದೆ. ಹೀಗಾಗಿ ಮುಷ್ಕರವನ್ನ ತಾತ್ಕಾಲಿಕವಾಗಿ ಹಿಂಪಡೆಯುತ್ತಿದ್ದೇವೆ. ಸಾರಿಗೆ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುತ್ತಾರೆ ಅಂತ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಇವತ್ತು ಸಂಜೆಯಿಂದಲೇ ಬಿಎಂಟಿಸಿ ಮತ್ತು ಕೆಎಸ್​ಆರ್​ಟಿಸಿ ಬಸ್​ಗಳ ಸಂಚಾರ ಶುರುವಾಗಿದೆ.

-masthmagaa.com

Contact Us for Advertisement

Leave a Reply