masthmagaa.com:

ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಸೋಲನ್ನು ಒಪ್ಪಿಕೊಳ್ಳದೇ, ಅಧಿಕಾರವನ್ನ ಹಸ್ತಾಂತರ ಮಾಡಲು ಹಿಂದೇಟು ಹಾಕ್ತಿರುವ ಡೊನಾಲ್ಡ್​ ಟ್ರಂಪ್ ಇದೇ ಮೊದಲ ಬಾರಿಗೆ ಜೋ. ಬೈಡೆನ್ ಅವರ ಗೆಲುವನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಟ್ರಂಪ್, ‘ಚುನಾವಣೆಯಲ್ಲಿ ಅಕ್ರಮ ನಡೆದಿದ್ದರಿಂದ ಬೈಡೆನ್ ಗೆದ್ದಿದ್ದಾರೆ’ ಅಂತ ಬರೆದುಕೊಂಡಿದ್ದಾರೆ. ಕೊನೆಗೂ ಬೈಡೆನ್ ಅವರ ಗೆಲುವವನ್ನ ಟ್ರಂಪ್ ಒಪ್ಪಿಕೊಂಡಿದ್ದಾರೆ ಅಂತ ಮಾಧ್ಯಮಗಳಲ್ಲಿ ಹೆಡ್​ಲೈನ್ಸ್ ಆಯ್ತು. ಇದರ ಬೆನ್ನಲ್ಲೇ ಯುಟರ್ನ್ ಹೊಡೆದ ಟ್ರಂಪ್, ‘ಜೋ ಬೈಡೆನ್ ಗೆದ್ದಿರೋದು ಫೇಕ್ ಮಾಧ್ಯಮಗಳ ದೃಷ್ಟಿಯಲ್ಲಿ. ನಾನು ಏನನ್ನೂ ಒಪ್ಪಿಕೊಂಡಿಲ್ಲ. ಈ ಚುನಾವಣೆಯಲ್ಲಿ ಗೆದ್ದಿದ್ದು ನಾನೇ’ ಅಂತ ಸರಣಿ ಟ್ವೀಟ್ ಮಾಡಿದ್ದಾರೆ.

-masthmagaa.com

Contact Us for Advertisement

Leave a Reply