ಸಚಿವ ಚೆಲುವರಾಯ ಲಂಚಕ್ಕೆ ಬೇಡಿಕೆ ಕೇಸ್‌ನಲ್ಲಿ ಟ್ವಿಸ್ಟ್‌!

masthmagaa.com:

ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಅಂತ ಆರೋಪಿಸಿ ನಕಲಿ ಪತ್ರ ಸೃಷ್ಟಿಸಿದ ಆರೋಪದಲ್ಲಿ ಮೈಸೂರು ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಗುರುಪ್ರಸಾದ್ ಹಾಗೂ ಕೃಷಿ ಅಧಿಕಾರಿ ಸುದರ್ಶನ್​ ಅನ್ನುವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಇದೀಗ ಈ ಕೇಸ್‌ಗೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಬಂಧಿಸಿದ್ದ ಇಬ್ಬರು ಕೃಷಿ ಅಧಿಕಾರಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆರೋಪಿಗಳನ್ನು 3 ದಿನ ಪೊಲೀಸರ ವಶಕ್ಕೆ ನೀಡಿ ಕೋರ್ಟ್‌ ಆದೇಶ ಹೊರಡಿಸಿದೆ. ಅಂದ್ಹಾಗೆ ಚಲುವರಾಯಸ್ವಾಮಿ 6 ರಿಂದ 8 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಅಂತ ಆರೋಪಿಸಿ ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವಪುರ, ನಾಗಮಂಗಲ, ಶ್ರೀರಂಗಪಟ್ಟಣ, ಮದ್ದೂರಿನ ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರದ ಮೂಲಕ ದೂರು ನೀಡಿದ್ದರು.

-masthmagaa.com

Contact Us for Advertisement

Leave a Reply